September 5, 2026
ಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ದಲ್ಲಿ 2026 -27ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲೆಯ ಸಂಚಾಲಕ ಅನಂತಪದ್ಮನಾಭ ಭಟ್ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಈ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಹೊಸದಾಗಿ ಸೇರ್ಪಡೆಗೊಂಡ ಶಾಲಾ ಮಕ್ಕಳನ್ನು ಪನ್ನೀರು ಹಾಕಿ, ಆರತಿ ಎತ್ತಿ ಶಾಲೆಗೆ ಬರಮಾಡಿಕೊಳ್ಳಲಾಯಿತು. ಸ್ಲೇಟು, ಬಳಪ ಹಾಗೂ ಆಟದ ಸಾಮಾನುಗಳನ್ನು ಮಕ್ಕಳಿಗೆ ನೀಡಲಾಯಿತು.
ವೇದಿಕೆಯಲ್ಲಿ ಶಾಲಾ ಎಸ್.ಡಿ.ಯಂ.ಸಿ.ಅಧ್ಯಕ್ಷ ರಾಜೇಶ್ ಉಪಸ್ಥಿತರಿದ್ದು ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ವಹಿಸಿಕೊಂಡಿದ್ದರು. ಜೋಸೆಫ್ ಇವರು ಪ್ರಾಸ್ತವಿಕ ಮಾತುಗಳನ್ನಾಡಿದರು.

ವಿದ್ಯಾರ್ಥಿನಿಯರು ಪ್ರಾರ್ಥಿಸಿದ ಈ ಕಾರ್ಯಕ್ರಮಕ್ಕೆ ಶೇಖರ್ ಗೌಡ ಸ್ವಾಗತಿಸಿ, ಉಷಾ ಕುಮಾರಿ ವಂದಿಸಿದರು. ಶ್ರೀಜಾ ಎ ಕಾರ್ಯಕ್ರಮ ನಿರ್ವಹಿಸಿದರು.

Related posts

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಲಾಯಿಲ ಜನಸ್ಪಂದನ ಸಭೆ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya
error: Content is protected !!