September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ಸೇವಾ ನಿವೃತ್ತಿ

ಬೆಳ್ತಂಗಡಿ: ಸುಮಾರು 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸರ್ಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇಲ್ಲಿನ ಸಹ ಶಿಕ್ಷಕ ಜಿಲ್ಲಾ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಎಂ ರವರು ಸೇವಾ ನಿವೃತ್ತಿ ಹೊಂದಿದ್ದಾರೆ.

ಫೆಬ್ರವರಿ 7, 1990 ರಂದು ಸರ್ಕಾರಿ ಕಿ.ಪ್ರಾಥಮಿಕ ಶಾಲೆ ಕುಂಜತ್ತೋಡಿಯಲ್ಲಿ ವೃತ್ತಿ ಜೀವನ ಆರಂಭಿಸಿ ಅಲ್ಲಿ 6ವರ್ಷದ , ನಂತರ ಸ.ಹಿ.ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನದಲ್ಲಿ 10ವರ್ಷ , ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ 3ವರ್ಷ; ಬೆಳ್ತಂಗಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಯಾಗಿ 3 ವರ್ಷ ಸೇವೆ ಸಲ್ಲಿಸಿದರು, ಮುಂದೆ 2012ರಲ್ಲಿ ಸರ್ಕಾರಿ ಪ್ರೌಢ ಶಾಲೆ ಕೊಣಾಲು ಪುತ್ತೂರು ತಾಲೂಕು ಇಲ್ಲಿಗೆ ಭಡ್ತಿಗೊಂಡು ವರ್ಗಾವಣೆಯಾಗಿ 7ವರ್ಷ ಸೇವೆ ಸಲ್ಲಿಸುತ್ತಾರೆ, 2019ರಲ್ಲಿ ಬೆಳ್ತಂಗಡಿ ತಾಲೂಕಿನ ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿ ಶಾಲೆಯಲ್ಲಿ 7 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹೀಗೆ ಪ್ರಾಥಮಿಕ ಶಾಲೆಯಲ್ಲಿ 22ವರ್ಷ, ಪ್ರೌಢ ಶಾಲೆಯಲ್ಲಿ 14 ವರ್ಷಗಳು. ಒಟ್ಟು 36ವರ್ಷ, 3 ತಿಂಗಳು, 22ದಿನಗಳು ಸೇವೆ ಸಲ್ಲಿಸಿದ್ದಾರೆ.

ಇವರು ಗಮಕ ಪ್ರವಚನಕಾರ, ಯಕ್ಷಗಾನ ತಾಳಮದ್ದಳೆ ಅರ್ಥದಾರಿ , ವೇಷದಾರಿಯಾಗಿರುವ ಇವರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ನಾಟ್ಯ, ನಾಟಕ ಕಲಿಸಿ ಮಕ್ಕಳಿಂದ ಪ್ರದರ್ಶನ ಮಾಡಿಸಿದ್ದಾರೆ, ಅದೇ ರೀತಿ ಸಾಮಾಜಿಕ ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ಇವರಿಗೆ ಶಿಕ್ಷಣ ಇಲಾಖೆಯು 2025ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಕೊಯ್ಯೂರು ಗ್ರಾಮದ ಶ್ರೀಮತಿ ಲಕ್ಷ್ಮೀ ಮತ್ತು ಚಂದಪ್ಪ ಗೌಡ ದಂಪತಿಯ ಪುತ್ರ,

Related posts

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಪಣೆಜಾಲು ಶ್ರೀ ಸ್ಟಾರ್‌ ಯುವಕ ಮಂಡಲದ ಅಧ್ಯಕ್ಷರಾಗಿ ಗಣೇಶ್ ಆಚಾರ್ಯ, ಕಾರ್ಯದರ್ಶಿಯಾಗಿ ರಾಜೇಶ್

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಓಡಿಲ್ನಾಳ ಸ. ಉ. ಪ್ರಾಥಮಿಕ ಶಾಲಾ ಮಕ್ಕಳಿಗೆ ಮುಳಿಯ ಜ್ಯುವೆಲ್ಲರ್ಸ್ ಹಾಗೂ ದಾನಿಗಳಿಂದ ಬ್ಯಾಗ್, ಸಮವಸ್ತ್ರ ವಿತರಣೆ

Suddi Udaya
error: Content is protected !!