23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ. ಶಾಲೆ ಕುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಜರುಗಿತು.

ವಿದ್ಯಾರ್ಥಿಗಳನ್ನು ಶಾಲಾ ಅಧ್ಯಾಪಕ ವೃಂದದವರು ಬಲೂನ್ ಮತ್ತು ಬ್ಯಾಡ್ಜ್ ನೀಡಿ, ಎಸ್ ಕೆ ಎಫ್ ಮದ್ದಡ್ಕ ಇವರು ಸಿಹಿ ತಿಂಡಿ ನೀಡಿ ಸ್ವಾಗತಿಸಿದರು.

ಸಭಾ ಕಾರ್ಯಕ್ರಮವನ್ನು ಪುಟಾಣಿಗಳು ದೀಪ ಬೆಳಗಿಸಿ ಉದ್ಘಾಟಿಸಿದರು. ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಶ್ರೀಮತಿ ಲಾವಣ್ಯ ಶೆಟ್ಟಿ ಅರ್ಕಜೆ ಅಧ್ಯಕ್ಷತೆ ವಹಿಸಿದ್ದರು. ನಿರ್ಗಮಿತ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಹಾಗೂ ಎಸ್ ಡಿ ಎಂ ಸಿ ಸದಸ್ಯರು. ಮದ್ದಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲ, ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿ, ಆಶಾ ಕಾರ್ಯಕರ್ತೆ ಶ್ರೀಮತಿ ಜಯಂತಿ, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಸರ್ಕಾರ/ಇಲಾಖೆ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕ್ರೀಡೆಯಲ್ಲಿ ಸಾಧನೆಗೈದ ವಿದ್ಯಾರ್ಥಿಯನ್ನು ನಗದು ಹಾಗೂ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು. ಆರೋಗ್ಯ ಕಾರ್ಯಕರ್ತೆ ಶ್ರೀಮತಿ ಪ್ರೀತಿಯವರು ಡೆಂಗ್ಯೂ ಹಾಗೂ ಮಲೇರಿಯ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯ ಶಿಕ್ಷಕ ಭಾಸ್ಕರ ಸ್ವಾಗತಿಸಿ ಶೈಕ್ಷಣಿಕ ವರ್ಷದ ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಫಿಲೋಮಿನಾ ಲೋಬೋ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಅಡಿಕೆ ಆಮದು ನಿಷೇಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಮಾ.7 ರಂದು ದ.ಕ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya
error: Content is protected !!