24.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ: ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ : ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗೇರುಕಟ್ಟೆಯಾಗಿ ಹಾಗೂ ಮಚ್ಚಿನ ಸರ್ಕಾರಿ ಪ್ರೌಢಶಾಲೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಮಚ್ಚಿನವನ್ನಾಗಿ ಪರಿವರ್ತಿಸಲು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ ಎಂದು ಶಾಸಕ ಹರೀಶ್ ಪೂಂಜ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಗ್ರಾಮೀಣ ಮಟ್ಟದಲ್ಲಿಯೇ ಒದಗಿಸುವ ಉದ್ದೇಶದಿಂದ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಾಗಿ ಮೇಲ್ದರ್ಜೆಗೇರಿಸಲು ನಿರಂತರ ಪ್ರಯತ್ನ ಮಾಡಲಾಗಿತ್ತು. ಸರ್ಕಾರದ ಈ ಆದೇಶದಿಂದ ವಿದ್ಯಾರ್ಥಿಗಳಿಗೆ ಒಂದೇ ಆವರಣದಲ್ಲಿ ಸಮಗ್ರ ಶಿಕ್ಷಣ ಸೌಲಭ್ಯ, ಉತ್ತಮ ಶೈಕ್ಷಣಿಕ ವಾತಾವರಣ ಹಾಗೂ ಭವಿಷ್ಯಕ್ಕೆ ಪೂರಕವಾದ ಅವಕಾಶಗಳು ದೊರೆಯಲಿವೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಮಹತ್ವದ ಬೇಡಿಕೆಯನ್ನು ಪರಿಗಣಿಸಿ ಆದೇಶ ಹೊರಡಿಸಿದ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವರಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಇದು ಗ್ರಾಮೀಣ ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಕು ನೀಡಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಚಾರ್ಮಾಡಿ : ಅನ್ನಾರ್ ನದಿಯ ಸೇತುವೆಯ ಅಡಿಯಲ್ಲಿ ದನದ ತಲೆ ಸೇರಿದಂತೆ ಅವಶೇಷಗಳು ಪತ್ತೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya
error: Content is protected !!