24.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27 ನೇ ಸಾಲಿನ ಎಲ್ ಕೆಜಿ ಯ ಮಕ್ಕಳಿಗೆ ಜೂ.3 ರಂದು “ಶಾಲಾ ಪ್ರಾರಂಭೋತ್ಸವವನ್ನು” ಶಾಲಾ ಸಭಾಂಗಣದಲ್ಲಿ ಅತ್ಯಂತ ಸಂಭ್ರಮದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆಯವರು ದೀಪವನ್ನು ಬೆಳಗಿಸುವ ಮೂಲಕ ‘ಶಿಕ್ಷಣದ ಮಹತ್ವದ ಜೊತೆಗೆ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು’ ಹಿತವಚನ ನೀಡಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಇವರು ವಿದ್ಯಾರ್ಥಿಗಳಿಗೆ ಹಿತವಚನವನ್ನು ನೀಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ವಾಣಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಇವರು ಆರೋಗ್ಯ ಮತ್ತು ಶಿಸ್ತಿನ ಬಗ್ಗೆ ಪ್ರಮುಖ ಅಂಶಗಳನ್ನು ತಿಳಿಯ ಪಡಿಸಿದರು. ವಾಣಿ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಇವರು ಉಪಸ್ಥಿತರಿದ್ದರು.


ಪ್ರೌಢ ಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ ಸ್ವಾಗತಿಸಿ, ಶಾಲೆಯ ನಿಯಮದ ಬಗ್ಗೆ ಪೋಷಕರಿಗೆ ತಿಳಿಹೇಳಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಹಾಸಿನಿ ಎ ವಂದಿಸಿದರು. ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕಿ ಶ್ರೀಮತಿ ವಂದನಾ ನಿರೂಪಣೆ ಮಾಡಿದರು.

Related posts

ಬಾರಿಕೆ ವಳಾಲ್ ಬಸದಿಯಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವ : ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಮಠದ ವತಿಯಿಂದ ಗೌರವ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya
error: Content is protected !!