23.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಲ್.ಸಿ. ಆರ್. ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂಭ್ರಮಾಚರಣೆ

ಕಕ್ಯಪದವು : ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ 2026-27 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಜೂ.1 ರಂದು ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.

ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಶಿವಾನಿ ಹಾಗೂ ಟ್ರಸ್ಟಿ ಯಜ್ಞೆಶ್ ರಾಜ್ , ಪ್ರಾಂಶುಪಾಲರಾದ ಜೋಸ್ಟನ್ ಲೋಬೊ, ಸಂಯೋಜಕರಾದ ಯಶವಂತ್ ಜಿ ನಾಯಕ್, ಮುಖ್ಯ ಶಿಕ್ಷಕಿಯಾದ ಶ್ರೀಮತಿ ವಿಜಯ ಕೆ ಹಾಗೂ ಶಿಕ್ಷಕ ವೃಂದದವರು ವಿಜೃಂಭಣೆಯಿಂದ ಮಕ್ಕಳನ್ನು ಸ್ವಾಗತಿಸಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ನೀಡಿ ಶುಭಾಶಯಗಳನ್ನು ತಿಳಿಸಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಹಾರೈಸಿದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಧನೆಯ ಜೊತೆಗೆ ಉತ್ತಮ ನಡತೆ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಗಳನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.

Related posts

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಜೆ.ಇ.ಇ.(ಬಿ.ಆರ್ಕ್) ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

205 ಮಕ್ಕಳಿಗೆ ಸಮವಸ್ತ್ರ, ನಾಲ್ವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ: ಸುರ್ಯ ದೇವಸ್ಥಾನದ ವತಿಯಿಂದ ಸಮಾಜಮುಖಿ ಕಾರ್ಯಕ್ರಮ: ಡಾ. ಸತೀಶ್ಚಂದ್ರ ಸುರ್ಯಗುತ್ತು ಅವರಿಂದ ವಿತರಣೆ

Suddi Udaya

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!