September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ; ಸನ್ಮಾನ

ಉಜಿರೆ: ಬದನಾಜೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ )ಉಜಿರೆ ಸಂಚಾಲಕ ಮೋಹನ್ ಕುಮಾರ್ ಲಕ್ಷ್ಮಿ ಗ್ರೂಪ್ಸ್ ಉಜಿರೆ, ಎಸ್ ಡಿ ಎಂ ಸಿ ಅಧ್ಯಕ್ಷ ಅನಿಲ್ ಡಿಸೋಜ, ನಿವೃತ್ತ ಮುಖ್ಯ ಶಿಕ್ಷಕ ಲಕ್ಷ್ಮಣ್ ಪೂಜಾರಿ, ನಿವೃತ್ತ ಶಿಕ್ಷಣ ಸಂಯೋಜಕ ಬಾಬು ಗೌಡ ಬಾಜಿಮಾರು, ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಯ್ಯಗೌಡ, ಸುಜ್ಞಾನ ನಿಧಿ ಯೋಜನೆಯ ಸಹ ಸಂಚಾಲಕ ಸೋಮಶೇಖರ್, ಸುಜ್ಞಾನ ನಿಧಿ ಯೋಜನೆಯ ಸಂಚಾಲಕ ಸುಂದರ್ ಬಂಗೇರ, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಪಿತಾಂಬರ ಪೂಜಾರಿ, ಶ್ರೀ ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ನವೀನ, ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂಡಳಿಯ ಅಧ್ಯಕ್ಷ ಸನತ್ ಕುಮಾರ್, ಹಳೆಪೇಟೆ ಉಜಿರೆ ಕ್ಲಸ್ಟರ್ನ ಸಂಪನ್ಮೂಲ ಅಧಿಕಾರಿ ಶ್ರೀಮತಿ ಪ್ರತಿಮಾ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಮುನಾ, ಬೆಳ್ತಂಗಡಿ ತಾಲೂಕು ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ನಿರಂಜನ್, ಮಾತೆಯರ ಸಂಘದ ಅಧ್ಯಕ್ಷೆ ವಿಮಲ ಗೌಡ ಉಪಸ್ಥಿತರಿದ್ದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆಯಲು ಕಾರಣಕರ್ತರಾದ ಬದನಾಜೆ ಪ್ರೌಢಶಾಲೆಯ ಶಿಕ್ಷಕ ವೃಂದವನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಯಾದ ನಿವೃತ್ತ ಮುಖ್ಯೋಪಾಧ್ಯಾಯರಾದ ಲಕ್ಷ್ಮಣ್ ಪೂಜಾರಿ ರವರನ್ನು ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕ ಗೋಪಾಲ್ ಸ್ವಾಗತಿಸಿದರು. ನಿರಂಜನ್ ದೈಹಿಕ ಶಿಕ್ಷಕರು ಕಾರ್ಯಕ್ರಮದ ಪ್ರಸ್ತಾವಿಕ ನುಡಿಯಾಡಿದರು. ಮಕ್ಕಳಿಗೆ ಪಠ್ಯಪುಸ್ತಕ ವಿತರಣಾ ಕಾರ್ಯಕ್ರಮವನ್ನುಸಹ ಶಿಕ್ಷಕಿ ಶ್ರೀಮತಿ ಜಯಂತಿ ಕುಮಾರಿ ನಡೆಸಿಕೊಟ್ಟರು. ಶ್ರೀಮತಿ ಲಲಿತ ಕುಮಾರಿ ಧನ್ಯವಾದ ಸಮರ್ಪಿಸಿದರು. ಜಯಲಕ್ಷ್ಮಿ ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಟ್ರಮೆ: ಪಟ್ಟೂರು ಪಿತ್ತಿಲ್ತಾರು ನಿವಾಸಿ ಮೋನಪ್ಪ ಎಂ. ಕೆ ನಿಧನ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!