24.2 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ

ಬೆಳ್ತಂಗಡಿ: ಕಳೆದ ಆರು ತಿಂಗಳಿನಿಂದ ಖಾಲಿಯಾಗಿದ್ದ ಬೆಳ್ತಂಗಡಿ ನ್ಯಾಯಾಲಯದ ಎರಡು ನ್ಯಾಯಾಧೀಶ ಹುದ್ದೆಗಳನ್ನು ಭರ್ತಿಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು ಪ್ರಧಾನ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಧೀಶರಾಗಿ ಮಂಗಳೂರಿನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ರಾಮಲಿಂಗಪ್ಪ ರವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶರಾಗಿ ಹೊಸದಾಗಿ ನ್ಯಾಯಾಧೀಶರಾಗಿ ನೇಮಕಗೊಂಡು ತರಬೇತಿ ಪೂರೈಸಿದ ಶಶಾಂಕ್ ನಾಗೇಂದ್ರ ಭಟ್ ರವರನ್ನು ನೇಮಕಗೊಳಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಎಂ. ಚಂದ್ರಶೇಖರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ನ್ಯಾಯಾಲಯಕ್ಕೆ ನ್ಯಾಯಾಧೀಶರನ್ನು ನೇಮಕಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್ ಲೋಬೋ ಮತ್ತು ಪದಾಧಿಕಾರಿಗಳು ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದ ಕ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್ ಟಿ ನರೇಂದ್ರ ಪ್ರಸಾದ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

Related posts

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಹರೀಶ್ ಪೂಂಜ:ತಾಲ್ಲೂಕಿನಾದ್ಯಾಂತ ಸಂಘಟನಾತ್ಮಕ ಪ್ರವಾಸ – 65ಕ್ಕೂ ಅಧಿಕಶಕ್ತಿ ಕೇಂದ್ರಗಳಿಗೆ ಭೇಟಿ ನೀಡಿ, ಕಾಯ೯ಕತ೯ರ ಸಭೆ

Suddi Udaya

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya
error: Content is protected !!