29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DFO), ಮಂಗಳೂರು ವಿಭಾಗ ಅವರನ್ನು ಶಿಶಿಲ ಗ್ರಾಮಸ್ಥರೊಂದಿಗೆ ಭೇಟಿ ಮಾಡಿ ಚರ್ಚೆ ನಡೆಸಲಾಯಿತು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಹಲವು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದರೂ, ಭೂಮಿಗೆ ಸಂಬಂಧಿಸಿದ ಅರಣ್ಯ ಇಲಾಖೆಯ ತೊಡಕುಗಳಿಂದ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆಯ ಗಂಭೀರತೆಯನ್ನು ಪರಿಗಣಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ವಾಸ್ತವಾಂಶಗಳನ್ನು ಪರಿಶೀಲಿಸಿ ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಕಾನೂನುಬದ್ಧವಾಗಿ ಸೂಕ್ತ ಪರಿಹಾರ ಕಲ್ಪಿಸುವಂತೆ ಮನವಿ ಮಾಡಲಾಗಿದೆ.

ಸಭೆಯಲ್ಲಿ ಗ್ರಾಮಸ್ಥರು ಎದುರಿಸುತ್ತಿರುವ ಭೂಮಿ ಸಂಬಂಧಿತ ತೊಂದರೆಗಳು, ದಾಖಲೆಗಳ ಸಮಸ್ಯೆ ಹಾಗೂ ಅರಣ್ಯ ಇಲಾಖೆಯಿಂದ ಉಂಟಾಗಿರುವ ಗೊಂದಲಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ರೈತರು ಹಾಗೂ ಸ್ಥಳೀಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಕೋರಲಾಗಿದೆ ಎಂದು ಶಾಸಕರು ತಿಳಿಸಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿ ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮುಂದುವರಿಸಲಾಗುವುದು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ಕ್ರೇನ್ – ಸ್ಕೂಟರ್ ಅಪಘಾತ:ಸ್ಕೂಟರ್ ಸವಾರ ದುರ್ಮರಣ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!