24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ ರವರು ಶಾಲಾ ಪ್ರಾರಂಭೋತ್ಸವಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ಬದಲಾದ ಶಿಕ್ಷಣ ವ್ಯವಸ್ಥೆಗೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹೊಂದಿಕೊಳ್ಳಬೇಕಾಗಿದೆ ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಸರ್ಕಾರ ಹಲವು ಯೋಜನೆಗಳನ್ನು ಹಾಕಿಕೊಳ್ಳುತಿದೆ, ವಿದ್ಯಾರ್ಥಿ ಪೋಷಕರು ವಿದ್ಯಾರ್ಥಿಗಳ ಕಡೆ ಮನೆಯಲ್ಲಿ ಹೆಚ್ಚಿನ ಗಮನ ಕೊಡಬೇಕು ಎಂದು ಅಭಿಪ್ರಾಯಪಟ್ಟರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಗುಂಪಕಲ್ಲು ಮಾತನಾಡಿ ಶಾಲೆಯಲ್ಲಿ ಈ ವರ್ಷದ ದಾಖಲಾತಿ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ಊರವರನ್ನು ಹಾಗೂ ಶಾಲಾ ಶಿಕ್ಷಕ ವೃಂದದವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಸ್ಥಳೀಯರಾದ ಚಿತ್ರರಂಜನ್ ಜೈನ್ ರವರು ಉಪಸ್ಥಿತರಿದ್ದರು,

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಮಾತನಾಡಿ ಶಾಲೆಯ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ಶ್ರೀಮತಿ ತೇಜಾವತಿ ಧನ್ಯವಾದಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ನಿರೂಪಿಸಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ವತಿಯಿಂದ ಬಿಸ್ಕೆಟ್ ಹಾಗೂ ಗಿರೀಶ್ ಕುದ್ರಂತಾಯ ರವರ ವತಿಯಿಂದ ಎಲ್ಲ ವಿದ್ಯಾರ್ಥಿಗಳಿಗೆ ಹೋಳಿಗೆಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಎಂ.ಡಿ.ಎಸ್ ಪರೀಕ್ಷೆ: ರಾಜ್ಯಮಟ್ಟದಲ್ಲಿ ವೇಣೂರಿನ ಡಾ. ದೀಕ್ಷಾ ಅಶ್ವಿತ್‌ ಕುಲಾಲ್ ರವರಿಗೆ 5ನೇ ರ್‍ಯಾಂಕ್

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!