24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ ಸುಮಂತ್ ಕೊಲೆ ಪ್ರಕರಣ, 5 ತಿಂಗಳಾದರೂ ಪತ್ತೆಯಾಗದ ಸುಳಿವು: ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜ ಮತ್ತು ಪೋಷಕರೊಂದಿಗೆ ಎಸ್‌ಪಿ ಭೇಟಿ

ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸುಮಂತ್ ಎಂಬ ಬಾಲಕ ಕೊಲೆಯಾಗಿ 5 ತಿಂಗಳಾಗುತ್ತ ಬರುತಿದ್ದು, ಅದರೆ ಕೊಲೆಗೈದವರ ಸುಳಿವು ಇನ್ನೂ ಪತ್ತೆಯಾಗದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸುಮಂತ್ ಕುಟುಂಬದವರೊಂದಿಗೆ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಸುಮಾರು 5 ತಿಂಗಳ ಹಿಂದೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂಬ ಉದ್ದೇಶದಿಂದ ಈ ಹಿಂದೆ ವಿಧಾನಮಂಡಲ ಅಧಿವೇಶನದಲ್ಲಿಯೇ ವಿಷಯವನ್ನು ಪ್ರಸ್ತಾಪಿಸಿದ್ದೆ.

ಅಲ್ಲದೇ, ಈ ಪ್ರಕರಣದ ಬಗ್ಗೆ, ಮಾನ್ಯ ಗೃಹಮಂತ್ರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮನವಿ ಸಲ್ಲಿಸಿದ್ದೆ. ಆದಾಗ್ಯೂ, ಇಷ್ಟೊಂದು ಸಮಯ ಕಳೆದರೂ ಕುಟುಂಬಕ್ಕೆ ನ್ಯಾಯ ದೊರಕದಿರುವುದು ನೋವಿನ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಮೃತ ಬಾಲಕ ಸುಮಂತ್ ಅವರ ಪೋಷಕರೊಂದಿಗೆ ಹಾಗೂ ಕುಟುಂಬದ ಸದಸ್ಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ, ಪ್ರಕರಣದ ಪ್ರಗತಿ ಹಾಗೂ ಇದುವರೆಗಿನ ತನಿಖೆಯ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎಲ್ಲಾ ಆಯಾಮಗಳಲ್ಲೂ ನಿಷ್ಪಕ್ಷಪಾತ ಹಾಗೂ ಸಮಗ್ರ ರೀತಿಯಲ್ಲಿ ತನಿಖೆ ನಡೆಸಿ ಆದಷ್ಟು ಶೀಘ್ರು ನ್ಯಾಯ ದೊರಕಿಸಿಕೊಡುವಂತೆ ಕೋರಲಾಯಿತು.
ನಿರಪರಾಧಿ ಬಾಲಕನ ಸಾವಿನ ಪ್ರಕರಣದಲ್ಲಿ ಸತ್ಯ ಹೊರಬಂದು ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ನಮ್ಮ ಪ್ರಯತ್ನ ಕುಟುಂಬಸ್ಥರೊಂದಿಗೆ ನಿರಂತರವಾಗಿರಲಿದೆ.ಎಂದು ಶಾಸಕ ಹರೀಶ್ ಪೂಂಜ ಹೇಳಿದ್ದಾರೆ

Related posts

ಜಿಯೋ ಭಾರತ್ 4g ಮೊಬೈಲ್ ಕೇವಲ 999 ಕ್ಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಆ.20-22: ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!