September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ ನಡೆಯುವ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, ಆಯ್ಕೆ

ಬೆಳ್ತಂಗಡಿ: ಪ್ರತಿ ವರ್ಷ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ) ವತಿಯಿಂದ ನಡೆಸುತ್ತಾ ಬಂದಿದ್ದು ಈ ವರ್ಷದ ಯೋಗ ರತ್ನ ಪ್ರಶಸ್ತಿಗೆ ಕು| ಚಿನ್ಮಯಿ. ಹೆಚ್, 10ನೇ ತರಗತಿ, ವಿ.ಎಸ್.ಎಸ್. ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಕೆಂಗೇರಿ, ಬೆಂಗಳೂರು ಇವರನ್ನು ಆಯ್ಕೆ ಮಾಡಲಾಗಿದೆ.

ಇವರು ಅಂತರಾಷ್ಟ್ರೀಯ ಯೋಗಾಸನ ವಿಜೇತೆಯಾಗಿದ್ದು ದೇಶ ವಿದೇಶಗಳಲ್ಲಿ ಯೋಗ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ. ಜೂನ್-21, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಅಧ್ಯಕ್ಷರು ಶಾಂತಿವನ ಟ್ರಸ್ಟ್ (ರಿ.) ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಇವರಿಗೆ ಗೌರವ ಪುರಸ್ಕಾರ ನಡೆಯಲಿದೆ. ಪ್ರಮಾಣ ಪತ್ರದ ಜೊತೆಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದು ಶ್ರೀ ಧ. ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಅವರು ಪಕ್ರಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಎಕ್ಸೆಲ್‌ನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ: ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ಬೆಳ್ತಂಗಡಿ ವಲಯದ ಭಜನಾ ಮಂಡಳಿಯ ಸಭೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಫೆ.4 – 5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ನವಗುಳಿಗ ಕ್ಷೇತ್ರದಲ್ಲಿ 10ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya
error: Content is protected !!