September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

ನಿಷ್ಠೆ, ಶ್ರಮ, ಬದ್ಧತೆಯ ಮೂಲಕ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದಲೇ ಕಟ್ಟುವಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷರಾಗಿ ರಾಜ್ಯಾದ್ಯಂತ ಪ್ರಯಾಣಿಸಿ ಪಕ್ಷವನ್ನು ಅಭೂತಪೂರ್ವ ಬಹುಮತದೊಂದಿಗೆ ಅಧಿಕಾರಕ್ಕೆ ತರುವಲ್ಲಿ ಡಿಕೆಶಿ ಅವರು ಶ್ರಮಿಸಿದ್ದು ಅರ್ಹವಾಗಿ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಶಾಸಕ,ದ‌ಕ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಎಂಟು ಭಾರಿ ಶಾಸಕರಾಗಿ, ಆರು ವರ್ಷ ರಾಜ್ಯಾದ್ಯಕ್ಷರಾಗಿ, ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ಹೈಕಮಾಂಡ್, ರಾಜ್ಯ ನಾಯಕರ ಮೆಚ್ಚುಗೆಗೆ ಪಾತ್ರರಾಗಿ, ಇದೀಗ ತನ್ನ ಪರಿಶ್ರಮಕ್ಕೆ ಅರ್ಹವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದರು.

Related posts

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ -ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya
error: Content is protected !!