24.3 C
ಪುತ್ತೂರು, ಬೆಳ್ತಂಗಡಿ
June 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್‌ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು
ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಲಕ್ಷ್ಮೀ ಯೋಜನೆಯಡಿ ಪ್ರಸ್ತುತ 59167 ಫಲಾನುಭವಿಗಳಿದ್ದು, ಆಗಸ್ಟ್-2023‌ ರಿಂದ ಫೆಬ್ರವರಿ-2026 ರವರೆಗೆ 315,94,82,000/-ರೂ ಸಹಾಯಧನ ದೊರೆತಿರುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಏಪ್ರೀಲ್‌ ತಿಂಗಳಲ್ಲಿ 27178 ಕುಟುಂಬಗಳಿಗೆ 1,37,40,501/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಏಪ್ರೀಲ್‌ ತಿಂಗಳಲ್ಲಿ 44966 ಕುಟುಂಬಗಳಿಗೆ 2‌,68,42,778/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 1,24,92,34,235/- ರೂ ಸಹಾಯಧನ ದೊರೆತಿರುವುದಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದರು.

ಮೇ 2026ರ ಮಾಹೆಯಲ್ಲಿ NFSA ಯೋಜನೆಯಡಿ ಮೇ ಹಾಗೂ ಜೂನ್‌ 2026ರ ಮಾಹೆಯ ಅಕ್ಕಿಯನ್ನು ಒಟ್ಟಿಗೆ ನೀಡಲಾಗುತ್ತಿದ್ದು, ತಾಲೂಕಿನಲ್ಲಿ ಒಟ್ಟು 48444 ಪಡಿತರ ಚೀಟಿಗಳಲ್ಲಿ 43157 ಪಡಿತರ ಚೀಟಿಗಳಿಗೆ ವಿತರಿಸಲಾಗಿ ಶೇಕಡಾ 89.34% ರಂತೆ 19083 ಕ್ವಿಂಟಾಲ್‌ ಪಡಿತರ ಅಕ್ಕಿ ವಿತರಿಸಲಾಗಿರುತ್ತದೆ. ಜೂನ್‌ 2026ರ ಮಾಹೆಯಲ್ಲಿ ಮೇ 2026 ಹಾಗೂ ಜೂನ್‌ 2026ರ ಮಾಹೆಯ ಅನ್ನಭಾಗ್ಯ ಅಕ್ಕಿಯನ್ನು ಒಟ್ಟಿಗೆ ವಿತರಿಸಲಾಗುವುದೆಂದು ಆಹಾರ ನಿರೀಕ್ಷಕರು ಸಭೆಗೆ ವಿವರ ನೀಡಿದರು
ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2026ರ ಮೇ ತಿಂಗಳಲ್ಲಿ 749596‌ ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023‌ ರಿಂದ ಈವರೆಗೆ ರೂ.109,23,44,374/- ಬಿಡುಗಡೆಯಾಗಿರುವುದಾಗಿ ಧರ್ಮಸ್ಥಳ ಘಟಕದ ಮೇಲ್ವಿಚಾಲಕರು ಸಭೆಗೆ ಮಾಹಿತಿ ನೀಡಿದರು.


ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 7715 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 941 ಅಭ್ಯರ್ಥಿಗಳಿಗೆ 2025ರ ನವೆಂಬರ್ ತಿಂಗಳಲ್ಲಿ 13,89‌,000ರೂ.ಗಳನ್ನು ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಆಗಸ್ಟ್-2023‌ ರಿಂದ 2025ರ ನವೆಂಬರ್ ತಿಂಗಳವರೆಗೆ 2,70,22,500.00‌ ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಶ್ರೀಮತಿ ಮಂಜೂಷರವರು ತಿಳಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಸದಸ್ಯರಾದ ಶೇಖರ್‌ ಕುಕ್ಕೇಡಿ, ತಾಲೂಕು ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಾಸುದೇವ ರಾವ್‌, ಶರೀಫ್‌ ಸಬರಬೈಲ್‌, ಕೆ.ನೇಮಿರಾಜ್‌ ಕಿಲ್ಲೂರು, ಶ್ರೀಮತಿ ಸೌಮ್ಯ ಲಾಯಿಲ, ಶ್ರೀ ಸತೀಶ ಹೆಗ್ಡೆ, ಶ್ರೀ ಯತೀಶ ಹಾಗೂ ನೋಡೆಲ್‌ ಅಧಿಕಾರಿಯಾದ ಹೆರಾಲ್ಡ್‌ ಸ್ವಿಕ್ವೇರಾ ಇವರು ಉಪಸ್ಥಿತರಿದ್ದರು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ ಎಸ್‌ಯುವಿ ವಿಭಾಗದ ವಿಕ್ಟೋರಿಸ್ ಕಾರು ಬಿಡುಗಡೆ

Suddi Udaya

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!