September 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಾರ್ಥನ.ಜೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರದ ಕುರಿತು ಮಾಹಿತಿ ನೀಡಿದರು. ಶಾಲಾ ಪರಿಸರದ ಕುರಿತು ವಿದ್ಯಾರ್ಥಿಗಳಿಂದ ಭಾಷಣ, ಗುಂಪು ಗಾಯನ, ರಸಪ್ರಶ್ನೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಕಿರು ಪ್ರಹಸನ, ಗಿಡ ನೆಡುವ ಚಟುವಟಿಕೆಗಳು ನಡೆಯಿತು.

ದಿನದ ವಿಶೇಷವಾಗಿ ಉಜಿರೆಯ ಯಶೋವನಕ್ಕೆ ವಿದ್ಯಾರ್ಥಿಗಳಿಂದ ಭೇಟಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಸುಮಾ ಶ್ರೀನಾಥ್ ವಹಿಸಿದ್ದರು. ವಿದ್ಯಾರ್ಥಿಗಳಾದ ಧೃತಿ ಹಾಗೂ ಅಭಿರಾಮ್ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆಯ ಅಧ್ಯಕ್ಷ ಚುನಾವಣೆಗೆ ವಿಘ್ನ : ಪೊಲೀಸ್ ಠಾಣೆಯ ಮೇಟ್ಟಿಲೇರಿದ ಮತದಾರರ ಪಟ್ಟಿಯ ವಿವಾದ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!