September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಲ್.ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಪರಿಸರದ ಮಹತ್ವ ಮತ್ತು ಅದನ್ನು ಸಂರಕ್ಷಿಸುವ ಅಗತ್ಯತೆಯ ಜಾಗೃತಿ ಮಾಡಿಸುವ ನಿಟ್ಟಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

“ನಮ್ಮ ಭೂಮಿ ನಮ್ಮ ಜವಾಬ್ದಾರಿ ” ಎಂಬ ಧ್ಯೆಯ ವಾಕ್ಕದ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಮತ್ತು ಪ್ರಕೃತಿಯನ್ನು ರಕ್ಷಿಸುವ ಜವಾಬ್ದಾರಿಯನ್ನು ಬೆಳೆಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಶಾಲೆಯ ಆವರಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳು ಘೋಷ ವಾಕ್ಕಗಳನ್ನು ಮತ್ತು ಪರಿಸರ ಗೀತೆಗಳನ್ನು ಹಾಡಿದರು.


ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆಗೂಡಿ ಶಾಲಾ ಮೈದಾನದ ಸುತ್ತಲೂ ವಿವಿಧ ಬಗೆಯ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪರಿಸರ ಸಂರಕ್ಷಣೆಯ ಕುರಿತಾದ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಜಾಗೃತಿ ಜಾಥಾ ನಡೆಸಿ” ಗಿಡ ಬೆಳೆಸಿ ಜೀವ ಉಳಿಸಿ ಪ್ಲಾಸ್ಟಿಕ್ ಮುಕ್ತ ಸಮಾಜ ನಮ್ಮದಾಗಲಿ” ಎಂಬ ಘೋಷಣೆಗಳು ಎಲ್ಲರ ಗಮನ ಸೆಳೆಯಿತು. ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೂ ವಿವಿಧ ಚಟುವಟಿಕೆಗಳನ್ನು ನಡೆಸಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಸಹ ಶಿಕ್ಷಕರಾದ ಪ್ರಶಾಂತ್ .ಕೆ ಪರಿಸರ ಜಾಗೃತಿಯ ಬಗ್ಗೆ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ಜೋಸ್ಟನ್ ಲೋಬೋ ಸಂಸ್ಥೆಯ ಸಂಯೋಜಕರು ಯಶವಂತ್ . ಜಿ ನಾಯಕ್ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿಜಯ ಕೆ. ಹಾಗೂ ಬೋಧಕ ಬೋಧಕೇತರ ವರ್ಗ ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಅಥ್ಲೆಟಿಕ್ಸ್ ಸ್ಪರ್ಧೆ: ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಅನೀಶ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!