September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಪರಿಸರ ಪ್ರೇಮವನ್ನು ನಾವು ಬೆಳೆಸಿಕೊಳ್ಳಬೇಕು. ಪ್ರತಿಯೊಬ್ಬರೂ ಗಿಡಗಳನ್ನು ನೆಡುವ ಹವ್ಯಾಸ ಬೆಳೆಸಿಕೊಂಡಾಗ ಪ್ರಕೃತಿ ಉಳಿಯಲು ಸಾಧ್ಯ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಜಾಕಿನ್ ಬಿನ್ ರವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಕಾರ್ಯಕ್ರಮದ ಬಳಿಕ ಅತಿಥಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಪ್ರಾಸ್ತಾವಿಕ ಮಾತುಗಳನ್ನಾಡಿ ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯನ್ನು ಬೆಳೆಸಿಕೊಳ್ಳಲು ಕರೆ ನೀಡಿದರು. ಶಾಲಾ ಶಿಕ್ಷಕಿಯರಾದ ಯಶಸ್ವಿನಿ ಕಾರ್ಯಕ್ರಮವನ್ನು ನಿರೂಪಿಸಿ, ಶಮೀಮಾ ಸ್ವಾಗತಿಸಿದರು. ಶಿಕ್ಷಕಿ ಶ್ವೇತಾರವರು ವಂದನಾರ್ಪಣೆಯನಿತ್ತರು.

Related posts

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಆ.10-12: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya
error: Content is protected !!