September 5, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಿದ್ವತ್ ಪಿಯು ಕಾಲೇಜಿನಲ್ಲಿ ಪರಿಸರ ದಿನ ಆಚರಣೆ: ಗಿಡ ನೆಟ್ಟ ಪ್ರಥಮ ಪಿಯು ವಿದ್ಯಾರ್ಥಿಗಳು

ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಸರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ವತ್ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಪರಿಸರವು ನಮ್ಮ ಜೀವನಾಡಿ; ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒಂದು ಮರ ನೆಡುವ ಮೂಲಕ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿ, ಹಸಿರು ಭವಿಷ್ಯವನ್ನು ನಿರ್ಮಿಸೋಣ ಎಂದರು.ಇಂದಿನ ಪರಿಸರ ಸಂರಕ್ಷಣೆ, ನಾಳಿನ ಸುಂದರ ಬದುಕಿನ ಭದ್ರತೆಯಾಗಿದೆ. ಪರಿಸರ ದಿನದಂದು ಪ್ರತಿಯೊಬ್ಬರೂ ಒಂದು ಮರ ನೆಟ್ಟು ಭೂಮಾತೆಯ ಋಣ ತೀರಿಸೋಣ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ತನ್ನ ಹುಟ್ಟುಹಬ್ಬದ ಪ್ರಯುಕ್ತ ಕಾಲೇಜಿನ ಸಾಮಾಜಿಕ ಕಳಕಳಿಯ ಭಾಗವಾಗಿ ದ್ವಿತೀಯ ಪಿಯುಸಿ ನೀಟ್ *ಎ* ವಿಭಾಗದ ಸಾಮ್ರಾಟ್ ಶ್ರೀಧ ಎಸ್.ಪಿ. ಅವರ ಹೆಸರಲ್ಲಿ ಹೂವಿನ ಹಾಗೂ ಹಣ್ಣಿನ ಗಿಡ ನೆಡಲಾಯಿತು.ಈ ವೇಳೆ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಇ.ಮಂಡಗಳಲೆ, ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್, ಆಡಳಿತಾಧಿಕಾರಿ ಅಶೋಕ್ ಶೆಟ್ಟಿ, ಉಪನ್ಯಾಸಕರು, ವಿವಿಧ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದರು.ವಿದ್ವತ್ ಇಕೊ ಕ್ಲಬ್ ನ ಸಂಚಾಲಕ ರಾಕೇಶ್ ಕಾರ್ಯಕ್ರಮ ಸಂಯೋಜಿಸಿದರು.

Related posts

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಶಾಸಕ ಹರೀಶ್ ಪೂಂಜರಿಂದ ಮ್ಯಾರಥನ್ ಜನಸ್ಪಂದನ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!