September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

ಧರ್ಮಸ್ಥಳ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಜೂ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. 

ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.

ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ 
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇAದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ 
ಕುಮಾರ್ ಉಪಸ್ಥಿತರಿದ್ದರು.

ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. 
ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ 
ವ್ಯಕ್ತಪಡಿಸಿದರು.

Related posts

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ನೀಟ್ ರಾಜ್ಯಮಟ್ಟದ ಸಾಧಕ ಚಿನ್ಮಯ್ ಗೌಡಗೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ ಅದ್ಧೂರಿ ಸನ್ಮಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya
error: Content is protected !!