September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

ಸೋಣಂದೂರು: 2026 -27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಣಂದೂರು ಇಲ್ಲಿ ಅದ್ದೂರಿಯಾಗಿ ನಡೆಸಲಾಯಿತು

ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಯನ್ನು ಸಹ ಪ್ರಾರಂಭಿಸಲಾಗಿದ್ದು ಈ ಶೈಕ್ಷಣಿಕ ವರ್ಷದ ಎಲ್ಲಾ ವಿದ್ಯಾರ್ಥಿಗಳಿಗೆ ಪನ್ನೀರ ಸಿಂಚನದೊಂದಿಗೆ ಆರತಿ ಬೆಳಗಿಸಿ ಬಲೂನುಗಳನ್ನು ನೀಡಿ ಜಾಥದ ಮೂಲಕ ಸ್ವಾಗತಿಸಲಾಯಿತು. ಈ ಜಾಥದಲ್ಲಿ ವಿದ್ಯಾರ್ಥಿಗಳೊಂದಿಗೆ ಪೋಷಕರು, ಎಸ್ ಡಿ ಎಂ ಸಿ ಸದಸ್ಯರು, ಶಿಕ್ಷಕ ವೃಂದ ಹಾಗೂ ಅತಿಥಿಗಳು, ಹಳೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು,

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ನಾಗೇಶ್ ಗೌಡ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಇದರ ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್, ಉಪಾಧ್ಯಕ್ಷ ಸೆಲೆಸ್ತಿನ್, ಶಾಲಾ ಮುಖ್ಯ ಶಿಕ್ಷಕಿಯಾದ ಅನಿತಾ ರೇಷ್ಮಾ ಡಿಸೋಜ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ ಆರ್, ಮಹಮ್ಮಾಯಿಕಟ್ಟೆ ಫ್ರೆಂಡ್ಸ್ ಸೋಣಂದೂರು ಅಧ್ಯಕ್ಷ ಮೋಹನ ನಾಯ್ಕ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ, ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಸರಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರದ ಯೋಜನೆಗಳ ಜೊತೆಗೆ ಸ್ಥಳೀಯ ಸಂಘ ಸಂಸ್ಥೆಗಳು ಇನ್ನಷ್ಟು ಉತ್ತಮವಾದ ಯೋಜನೆಗಳಿಗೆ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳು ಪೋಷಕರು ಎಸ್.ಡಿ.ಎಮ್ ಸಿ ಎಲ್ಲರೂ ಜೊತೆಗೂಡಿ ಜವಾಬ್ದಾರಿ ಹೊತ್ತುಕೊಂಡರೆ ಸರಕಾರಿ ಶಾಲೆಯು ಖಾಸಗಿ ಶಾಲೆಗಿಂತಲೂ ಉತ್ತಮವಾಗಿರುತ್ತದೆ ಎಂದು ಹೇಳಿ ಎಲ್ಲಾ ಮಕ್ಕಳಿಗೆ ರೋಟರಿ ಕ್ಲಬ್ ಇದರ ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್ ಶುಭ ಹಾರೈಸಿದರು.

ಶಾಲಾ ಹಳೆ ವಿದ್ಯಾರ್ಥಿ ಸಂಪತ್ ಶೆಟ್ಟಿ ಎಲ್ಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಿದರು. ಹಾಗೂ ರೋಟರಿ ಕ್ಲಬ್ ವತಿಯಿಂದ ನೀಡಲಾದ ನೋಟ್ ಪುಸ್ತಕಗಳನ್ನು ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್ ಹಾಗೂ ಉಪಾಧ್ಯಕ್ಷ ಸೆಲಿಸ್ತಿನ್ ಡಿಸೋಜಾ ಇವರ ಉಪಸ್ಥಿತಿಯಲ್ಲಿ ವಿತರಿಸಲಾಯಿತು ಹಾಗೂ ಇಲಾಖಾ ವತಿಯಿಂದ ನೀಡಲಾದ ಉಚಿತ ಪಠ್ಯಪುಸ್ತಕಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪೋಷಕರು, ಶಾಲಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು, ಸಹಶಿಕ್ಷಕಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿ, ಶ್ರೀಮತಿ ರಕ್ಷಾ ವಂದಿಸಿದರು.

Related posts

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ತೆಂಕಕಾರಂದೂರು: ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!