September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ವರ್ಷ 1ನೇ ತರಗತಿಗೆ ಹೊಸದಾಗಿ ಸೇರ್ಪಡೆಗೊಂಡ ಪುಟ್ಟ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯಿಂದ ಶಾಲಾ ಬ್ಯಾಗ್ ವಿತರಿಸಲಾಯಿತು .

ಮುಖ್ಯ ಅತಿಥಿಗಳಾಗಿ ಕೃಷ್ಣಶೆಟ್ಟಿ ನಿವೃತ್ತ ಪಾಲಕರು ರತ್ನಮಾನಸ ವಿದ್ಯಾರ್ಥಿ ನಿಲಯ ಉಜಿರೆ ಮತ್ತು ಶಾಲಾ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕರ್ ಆಗಮಿಸಿದ್ದರು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. 5, 6 ಮತ್ತು 7 ತರಗತಿಯ ವಿದ್ಯಾರ್ಥಿಗಳಿಗೆ ಲೇಖನಿಯನ್ನು ವಿತರಿಸಲಾಯಿತು

ಮುಖ್ಯ ಅತಿಥಿಗಳು ಆಡಳಿತ ಮಂಡಳಿಯಿಂದ ನೀಡಲ್ಪಟ್ಟ ಬ್ಯಾಗ್ ಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಕಲಿಕೆಯಲ್ಲಿ ಅಸಾಧಾರಣ ಸಾಮರ್ಥ್ಯವನ್ನು ಪ್ರಕಟಿಸಿ ಶಾಲೆಗೆ ಕೀರ್ತಿಯನ್ನು ತರುವಂತವರಾಗಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ನಾಯ್ಕ ವಹಿಸಿಕೊಂಡಿದ್ದರು.

ರೇವತಿ ಸ್ವಾಗತಿಸಿದರು. ಶ್ರೀಮತಿ ಅಶ್ವಿನಿ ಧನ್ಯವಾದವಿತ್ತರು. ಕುಸಪ್ಪಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya
error: Content is protected !!