September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ ಇಲ್ಲಿ ದಾನಿಗಳು ಕೊಡ ಮಾಡಿದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಶಾಲಾ ಹಳೆ ವಿದ್ಯಾರ್ಥಿ ಹಾಗೂ ದಾನಿಗಳಾದ ಪ್ರಕಾಶ್ ಪಾದೆಮನೆ, ವಿನುತಾ ಪ್ರಕಾಶ್, ವಿಮಲಾ ರಾಜು ಪೂಜಾರಿ ಇವರು ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾವು ಉಚಿತವಾಗಿ ಕೊಡಮಾಡಿದ ಪುಸ್ತಕಗಳನ್ನು ಅಂಗನವಾಡಿ ಮಕ್ಕಳಿಗೆ ಮತ್ತು ಎಲ್ಲ ವಿದ್ಯಾರ್ಥಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಮತಿ ವಿನುತಾ ಪ್ರಕಾಶ್ ಇವರು ವಿದ್ಯಾರ್ಥಿಗಳು ತಮಗೆ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಕರ ಮಾರ್ಗದರ್ಶನದಲ್ಲಿ ಅತ್ಯುತ್ತಮವಾಗಿ ಕಲಿತು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಜ್ಯೋತಿ ಸಹಾಯಕಿ ಶ್ರೀಮತಿ ಶ್ವೇತಾ ಮತ್ತು ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕಿ ಕು. ಅರ್ಪಿತಾ ಸ್ವಾಗತಿಸಿದರು. ಶಿಕ್ಷಕ ಸಹಶಿಕ್ಷಕ ಗಣರಾಜ್ ನಿರೂಪಿಸಿ ವಂದಿಸಿದರು.

Related posts

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಯು.ಡಿ.ಆರ್ ಹಾಗೂ ಒಂದು ದೂರರ್ಜಿ ಎಸ್.ಐ.ಟಿ ತನಿಖೆಗೆ ವರ್ಗಾವಣೆ

Suddi Udaya

ಬೆಳ್ತಂಗಡಿ ಎ.ಪಿ.ಎಂ.ಸಿ ನಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಎ.30-ಮೇ.3: ಮಾನ್ಯ ಸತ್ಯಚಾವಡಿ ತರವಾಡು ಮನೆಯ ಗೃಹಪ್ರವೇಶ: ಸ್ಥಳ ದೇವತಾ ಸಾನಿಧ್ಯಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ

Suddi Udaya
error: Content is protected !!