September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಶಿವಮೊಗ್ಗದಲ್ಲಿ ಕ್ರೇನ್‌ ಅಡಿಗೆ ಸಿಲುಕಿ ಪಿಲಿಗೂಡಿನ ನಾಗೇಶ್ ಮೃತ್ಯು

ಬೆಳ್ತಂಗಡಿ : ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹೊಸಮನೆ ದಿಡ್ಡಮ್ಮ ದೇವಸ್ಥಾನದ ಗೋಪುರ ಕೆಲಸದ ವೇಳೆ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.

ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಜೂ.5 ರಂದು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು.ದೇವಾಲಯದ ಕೆಲಸದ ವೇಳೆ ಕಲ್ಲನ್ನು ತೆಗೆದುಕೊಂಡು ರಿವರ್ಸ್ ಹೋಗುವ ವೇಳೆ ಎಡವಿ ಬಿದ್ದು ಕ್ರೇನ್‌ಗೆ ಚಕ್ರಕ್ಕೆ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ: ಮತ್ತೊಬ್ಬನ ಗುರುತು ಪತ್ತೆ ಹಚ್ಚಿದ ಎಸ್.ಐ.ಟಿ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!