September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ವಠಾರದಿಂದ ವಿದ್ಯಾರ್ಥಿ ಸಾಧಕರು ಹಾಗೂ ಮುಖ್ಯಶಿಕ್ಷಕರಿಗೆ ಗೌರವ ಸಮರ್ಪಣೆ

ಬೆಳ್ತಂಗಡಿ: ಕುತ್ಯಾರು ವಠಾರದ ವತಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಂಕಿತ್, ಕು. ದೃತಿ ಗೌಡ, ಧ್ರುವ ಸಿ. ಗೌಡ, ಕು.ಶ್ರೇಯ ಗೌಡ ಹಾಗೂ ಪ್ರದ್ಯೋತ್ ರಾವ್ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಚಿನ್ಮಯ್ ಹಾಗೂ ಕು.ನೇಹಾ ಕೃಷ್ಣ ಟಿ. ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕರಾಗಿ ಬಡ್ತಿ ಹೊಂದಿದ ರಾಧಾಕೃಷ್ಣ ಟಿ. ಅವರಿಗೆ ವಿಶೇಷ ಗೌರವ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ನಗರ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್, ಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ರಿಯಾಜ್ ಹಾಗೂ ಅಳದಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಕೆ.ಎಂ. ಸನ್ನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಾಧಕರನ್ನು ಅಭಿನಂದಿಸಿ ಶುಭ ಹಾರೈಸಿದರು.


ಎಸ್.ಡಿ.ಎಂ. ಕಾಲೇಜಿನ ಉಪನ್ಯಾಸಕರಾದ ಪ್ರದೀಪ್, ಅಂಕಿತ್, ಉದಯವಾಣಿ ಪತ್ರಿಕೆಯ ಹಿರಿಯ ವರದಿಗಾರ ಅಶೋಕ್ ಶೆಟ್ಟಿ, ನಿಲಯ ಪಾಲಕರ ಸಂಘದ ಲೋಕೇಶ್, ಬೆಳ್ತಂಗಡಿ ಜೂನಿಯರ್ ಕಾಲೇಜಿನ ಉಪನ್ಯಾಸಕರಾದ ಗಣೇಶ್ ಭಟ್, ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್, ಬೆಳ್ತಂಗಡಿ ಅರಣ್ಯ ಇಲಾಖೆಯ ರವೀಂದ್ರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಕುತ್ಯಾರು ವಠಾರದ ಬಂಧುಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ಮಹಿಳಾ ಜೇಸಿ ವಿಭಾಗದಿಂದ “ತಾಯಿಯೊಂದಿಗೆ ನಾನು” ಫೋಟೋ ಸ್ಪರ್ಧೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!