September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಇನ್ಮುಂದೆ ಎಲ್ಲ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ್ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ.

ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ(ಎಐ) ಮತ್ತು ಜಿಪಿಎಸ್ ಆಧಾರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|ಶಾಲಿನಿ ರಜನೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಜೂ.4ರಂದು ನಡೆದ ಸಭೆಯಲ್ಲಿ, ರಾಜ್ಯ ಸರ್ಕಾರದ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿ ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕೆಂದು ಮುಖ್ಯಮಂತ್ರಿಯವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಪ್ರಸ್ತುತ ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ ‘ಕರ್ತವ್ಯ ಆ್ಯಪ್’ ನಲ್ಲಿಈಗಾಗಲೇ ಹೆಚ್‌ ಆರ್ ಎಂ. ಎಸ್ ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿಗಳು ಹಾಗೂ ವರ್ಗದ ಮಾಹಿತಿಯನ್ನು ನೋಂದಾಯಿಸಲಾಗಿದೆ.

ಆದ್ರೆ ಬಹಳಷ್ಟು ಅಧಿಕಾರಿ/ಸಿಬ್ಬಂದಿಗಳು ಈ ತಂತ್ರಾಂಶ(ಆ್ಯಪ್)ವನ್ನು ನಿರಂತರವಾಗಿ ಬಳಸದೇ ಇರುವುದು ಕಂಡುಬಂದಿದೆ. ಆದ್ದರಿಂದ ಈ ನಿರ್ದೇಶನ ತಪ್ಪದೇ ಪಾಲಿಸಲು ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Related posts

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಅಶಕ್ತರಿಗೆ ಆರ್ಥಿಕ ನೆರವು: ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ ಅಜಿಲರಿಂದ ಹಸ್ತಾಂತರ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya
error: Content is protected !!