September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬಿಎಂಎಸ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ದ.ಕ. ಜಿಲ್ಲೆಗೆ ಆಗಮನ

ಮಂಗಳೂರು: ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ವಿ. ರಾಧಾಕೃಷ್ಣನ್ ಅವರು ಜೂ.5ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದರು.

ಜೂನ್ 7ರಂದು ನಡೆಯಲಿರುವ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವುದರ ಜೊತೆಗೆ ಜಿಲ್ಲೆಯ ವಿವಿಧ ಸಂಯೋಜಿತ ಯೂನಿಯನ್‌ಗಳಿಗೆ ಭೇಟಿ ನೀಡಿ ಸಂಘಟನಾ ಚಟುವಟಿಕೆಗಳ ಕುರಿತು ಮಾರ್ಗದರ್ಶನ ನೀಡಲಿದ್ದಾರೆ.

ಜಿಲ್ಲೆಗೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಭಾರತೀಯ ಮಜ್ದೂರ್ ಸಂಘದ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ರಾಷ್ಟಿçÃಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಸಹ ಕಾರ್ಯವಾಹಕ ಪ್ರಕಾಶ್ ಪಿ.ಎಸ್., ಭಾರತೀಯ ಮಜ್ದೂರ್ ಸಂಘದ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ ಹಾಗೂ ಜಿಲ್ಲಾ ಉಪಾಧ್ಯಕ್ಷ ರೋಹಿತಾಶ್ವ ಉಪಸ್ಥಿತರಿದ್ದರು.

ಜಿಲ್ಲಾ ಭೇಟಿಯ ಸಂದರ್ಭದಲ್ಲಿ ರಾಧಾಕೃಷ್ಣನ್ ಅವರು ಭಾರತೀಯ ಮಜ್ದೂರ್ ಸಂಘದ ಸಂಯೋಜಿತ ಯೂನಿಯನ್‌ಗಳ ಕಚೇರಿಗಳಿಗೆ ಭೇಟಿ ನೀಡಿ ಅವುಗಳ ಆಡಳಿತಾತ್ಮಕ ಹಾಗೂ ಸಂಘಟನಾ ಚಟುವಟಿಕೆಗಳ ಪರಿಶೀಲನೆ ನಡೆಸಲಿದ್ದಾರೆ. ಯೂನಿಯನ್‌ಗಳ ದಾಖಲಾತಿಗಳ ಸಮರ್ಪಕ ನಿರ್ವಹಣೆ, ಸದಸ್ಯತ್ವ ನೋಂದಣಿ, ರಿಜಿಸ್ಟರ್‌ಗಳ ಪಾಲನೆ, ಲೆಕ್ಕಪತ್ರಗಳ ನಿರ್ವಹಣೆ, ವಾರ್ಷಿಕ ವರದಿಗಳ ಸಲ್ಲಿಕೆ, ಅಫಿಲಿಯೇಷನ್ ನವೀಕರಣ ಹಾಗೂ ಭಾರತೀಯ ಮಜ್ದೂರ್ ಸಂಘದ ನಿಯಮಾವಳಿಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಪದಾಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ಜೂನ್ ೭ರಂದು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲೆಯ ಸಂಘಟನಾ ಬೆಳವಣಿಗೆ, ಕಾರ್ಮಿಕರ ಸಮಸ್ಯೆಗಳು, ಸಂಯೋಜಿತ ಯೂನಿಯನ್‌ಗಳ ಕಾರ್ಯವೈಖರಿ ಹಾಗೂ ಮುಂದಿನ ಸಂಘಟನಾ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ.

Related posts

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ವಿಮೆನ್ ಇಂಡಿಯಾ ಮೂವ್ಮೆಂಟ್ ಆಗ್ರಹ

Suddi Udaya
error: Content is protected !!