July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆ ಪಿ.ಎಂ. ಶ್ರೀ ಸ. ಉ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ವೇಣೂರು : ಪಿ.ಎಂ. ಶ್ರೀ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆ, ಬಜಿರೆಯಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯಿಂದ ನೀಡಲಾದ ವಿವಿಧ ಜಾತಿಯ ಗಿಡಗಳನ್ನು ಶಾಲಾ ಆವರಣದಲ್ಲಿ ನೆಡುವುದರ ಮೂಲಕ ಚಾಲನೆ ನೀಡಲಾಯಿತು. ಗಿಡ ನೆಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಅತಿಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಮನಗಂಡು, ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಭರತ್, ವಲಯ ಅರಣ್ಯ ಅಧಿಕಾರಿ ಅಶ್ವಿತ್ ಕೆ., ಗಸ್ತು ಅರಣ್ಯಪಾಲಕ ದಿವಾಕರ್, ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ಲೋಕೇಶ್ ಕೋರ್ಲೋಡಿ, ತಾಯಂದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಉಪಾಧ್ಯಕ್ಷೆ ಶ್ರೀಮತಿ ಸವಿತಾ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಶೆಟ್ಟಿ, ಎಸ್.ಡಿ.ಎಂ.ಸಿ. ಸದಸ್ಯರು, ತಾಯಂದಿರ ಸಮಿತಿ ಸದಸ್ಯರು, ಎಸ್.ಬಿ.ಸಿ. ಸದಸ್ಯರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶ್ರೀ ಭರತ್ ಅವರು ಮಾತನಾಡಿ, “ಒಬ್ಬ ವ್ಯಕ್ತಿ ಒಂದು ಗಿಡ ನೆಟ್ಟು ಅದನ್ನು ಪೋಷಿಸಿದರೆ, ಆತ ಭವಿಷ್ಯದ ಪೀಳಿಗೆಗೆ ಅಮೂಲ್ಯವಾದ ಕೊಡುಗೆಯನ್ನು ನೀಡಿದಂತಾಗುತ್ತದೆ” ಎಂದು ಹೇಳಿದರು. ಪರಿಸರವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಅರಣ್ಯ ನಾಶ, ಪ್ಲಾಸ್ಟಿಕ್ ಬಳಕೆ ಮತ್ತು ಮಾಲಿನ್ಯದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ “ಗಿಡ ನೆಡಿ – ಜೀವ ಉಳಿಸಿ”, “ಪರಿಸರ ಉಳಿಸಿ – ಭವಿಷ್ಯ ಬೆಳೆಸಿ”, “ಹಸಿರು ನಮ್ಮ ಉಸಿರು” ಮುಂತಾದ ಘೋಷಣೆಗಳನ್ನು ಕೂಗಿಸಲಾಯಿತು. ನಂತರ ಎಲ್ಲಾ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.ಕೆಲವು ವಿದ್ಯಾರ್ಥಿಗಳು ತಮ್ಮ ಭಾಷಣಗಳ ಮೂಲಕ ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ಅವರು ಪರಿಸರ ಸಂರಕ್ಷಣೆ, ನೀರಿನ ಉಳಿತಾಯ, ಪ್ಲಾಸ್ಟಿಕ್ ತ್ಯಜಿಸುವಿಕೆ ಹಾಗೂ ಗಿಡಮರಗಳ ಮಹತ್ವದ ಕುರಿತು ಮನಮುಟ್ಟುವ ವಿಚಾರಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ರಶ್ಮಿ ಶೆಟ್ಟಿ ಅವರು ಮಾತನಾಡಿ, “ಇಂದು ನಾವು ನೆಡುವ ಪ್ರತಿಯೊಂದು ಗಿಡವೂ ನಾಳಿನ ಆರೋಗ್ಯಕರ ಸಮಾಜದ ಅಡಿಪಾಯವಾಗಿದೆ. ಪರಿಸರ ಸಂರಕ್ಷಣೆ ಕೇವಲ ಒಂದು ದಿನದ ಆಚರಣೆಯಾಗದೇ ನಮ್ಮ ದೈನಂದಿನ ಜೀವನದ ಭಾಗವಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪರಿಸರದ ಬಗ್ಗೆ ಕಾಳಜಿ ವಹಿಸುವ ಮೂಲಕ ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಸಮಾಜವನ್ನು ನಿರ್ಮಿಸಬಹುದೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ರಾಜಶ್ರೀ ಆಚಾರ್ಯ (8ನೇ ತರಗತಿ) ಸ್ವಾಗತಿಸಿದರು. ಶ್ರೀದೇವಿ (8ನೇ ತರಗತಿ) ವಂದಿಸಿದರು. ಸ್ಪಂದನಾ (8ನೇ ತರಗತಿ) ಹಾಗೂ ವರ್ಧಿನಿ (8ನೇ ತರಗತಿ) ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು.

Related posts

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ಶ್ರೀ ಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಬಗ್ಗೆ ಬೆಳ್ತಂಗಡಿ ವಲಯದ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಹುಣ್ಸೆಕಟ್ಟೆ: ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕರಿಯಪ್ಪ ಇವರಿಗೆ ಗೌರವಾರ್ಪಣೆ

Suddi Udaya
error: Content is protected !!