September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

ಉಜಿರೆ: 2026–27ನೇ ಶೈಕ್ಷಣಿಕ ಸಾಲಿನ ಅನುಗ್ರಹ ಪೂರ್ವ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವು ಶಾಲಾ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು.ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ ಫಾ. ವಿಜಯ್ ಲೋಬೊ ಹಾಗೂ ಮಕ್ಕಳೊಂದಿಗೆ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳು ವಿವಿಧ ಹಾಡುಗಳನ್ನು ಹಾಡಿ ಎಲ್ಲರ ಮನಸೆಳೆದರು. ಪ್ರಾಂಶುಪಾಲರಾದ ಫಾ. ವಿಜಯ್ ಲೋಬೊ ಅವರು ತಮ್ಮ ಪ್ರಸ್ತಾವಿಕ ಭಾಷಣದಲ್ಲಿ ಶಾಲೆಗೆ ತಮ್ಮ ಮಕ್ಕಳನ್ನು ದಾಖಲಿಸಿದ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸುವಾಗ ಅವರ ಅಗತ್ಯತೆಗಳು, ಆರೋಗ್ಯ ಹಾಗೂ ಶಿಸ್ತುಬದ್ಧ ಜೀವನದ ಕಡೆಗೂ ಹೆಚ್ಚಿನ ಗಮನ ಹರಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಫಾ. ಅಬೆಲ್ ಲೋಬೊ ಅವರು ಮಾತನಾಡಿ, ನೂತನ ಶೈಕ್ಷಣಿಕ ವರ್ಷವು ಮಕ್ಕಳಿಗೆ ಜ್ಞಾನ, ಸಂಸ್ಕಾರ ಹಾಗೂ ಸರ್ವತೋಮುಖ ಬೆಳವಣಿಗೆಯನ್ನು ನೀಡಲಿ ಎಂದು ಶುಭ ಹಾರೈಸಿದರು. ಶಾಲೆಯ ವಿವಿಧ ಶೈಕ್ಷಣಿಕ ಮತ್ತು ಸಹಪಠ್ಯ ಚಟುವಟಿಕೆಗಳಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶಿಕ್ಷಕಿರಾದ ಗೀತಾ , ಅಕ್ಷತಾ ಮತ್ತು ರೇಷ್ಮಾ ಇವರು ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರುಕಾರ್ಯಕ್ರಮದ ಕೊನೆಯಲ್ಲಿ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು. ಶಿಕ್ಷಕಿ ಪ್ರಣಿತಾ ಸ್ವಾಗತಿಸಿ, ಅಕ್ಷತಾ ಕಾರ್ಯಕ್ರಮ ನಿರೂಪಿಸಿ, ರೇಷ್ಮಾ ವಂದನಾರ್ಪಣೆಗೈದರು.

Related posts

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya
error: Content is protected !!