September 6, 2026
ರಾಜಕೀಯವರದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರದ ಪ್ರತಿನಿಧಿ ಸಭೆ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಬೆಳ್ತಂಗಡಿಯಲ್ಲಿ ಪಕ್ಷದ ಕಚೇರಿಯಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರು, ನಾಯಕರು, ಕಾರ್ಯಕರ್ತರು ಸಕ್ರಿಯ ರಾಜಕೀಯದಲ್ಲಿ ತೊಡಗಿಸಿಕೊಂಡು ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದರೊಂದಿಗೆ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗಬೇಕು. ಬೂತ್ ಮಟ್ಟದಲ್ಲಿ ಜನ ಸಮಾನ್ಯರ ಸಮಸ್ಯೆಗಳನ್ನು ಆಲಿಸಿ ಅವರ ಪರ ಧ್ವನಿಯಾಗಬೇಕು. ಪಕ್ಷ ಸೇರ್ಪಡೆ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಕ್ಷೇತ್ರ ಸಮಿತಿಯ ವತಿಯಿಂದ ಕೈಗೊಂಡ ಜನಪರ ಹೋರಾಟಗಳು, ಸಂಘಟನಾ ಚಟುವಟಿಕೆಗಳು ಹಾಗೂ ವಿವಿಧ ಕಾರ್ಯಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಪಕ್ಷದ ಬಲವರ್ಧನೆ, ಮುಂಬರುವ ಕಾರ್ಯಕ್ರಮಗಳು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಪರಿಹಾರಕ್ಕಾಗಿ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಮುಂದಿನ ಕಾರ್ಯತಂತ್ರಗಳನ್ನು ರೂಪಿಸಲಾಯಿತು.

ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ಅತಿಥಿ ಭಾಷಣ ಮಾಡಿದರು. ಕ್ಷೇತ್ರದ ವಿವಿಧ ಬ್ಲಾಕ್‌ಗಳ ಪದಾಧಿಕಾರಿಗಳು ಹಾಗೂ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಮಂಡಿಸಿದರು.ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ಅಶ್ರಫ್ ತಲಪಾಡಿ, ಶಾಕಿರ್ ಅಲೆಕೆಮಜಲ್, ನವಾಝ್ ಕಟ್ಟೆ, ಕ್ಷೇತ್ರ ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿಹ್ ಮದ್ದಡ್ಕ ಸೇರಿದಂತೆ ಕ್ಷೇತ್ರ, ಬ್ಲಾಕ್ ನಾಯಕರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

Suddi Udaya

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ನ್ಯಾಯಕ್ಕಾಗಿ ಎಸ್ಸೆಸ್ಸೆಫ್ ವತಿಯಿಂದ ವಿದ್ಯಾರ್ಥಿ ರ‍್ಯಾಲಿ ಹಾಗೂ ಪ್ರತಿಭಟನೆ

Suddi Udaya
error: Content is protected !!