22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿರಾಜಕೀಯವರದಿ

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಕಾರ್ಯಕರ್ತರ ಸಮಾವೇಶವು ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಪಕ್ಷದ ರಾಷ್ಟ್ರ ರಾಜಕಾರಣದ ಕುರಿತು ಮಾತನಾಡಿದ ಮಂಗಳೂರು ನಗರ ಜಿಲ್ಲಾ ಕಾರ್ಯಧ್ಯಕ್ಷ ಅಶ್ರಫ್ ಅಡ್ಡೂರು, ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಹಾಗೂ ಸಂವಿಧಾನಿಕ ಹಕ್ಕುಗಳ ರಕ್ಷಣೆಗೆ ಎಸ್‌ಡಿಪಿಐ ನಿರಂತರವಾಗಿ ಹೋರಾಟ ನಡೆಸುತ್ತಿದ್ದು, ಜನಸಾಮಾನ್ಯರ ಧ್ವನಿಯಾಗಿ ಪಕ್ಷ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದ್ದು, ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಪಕ್ಷದ ಕಾರ್ಯಕರ್ತರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು. ದೇಶದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಮುಂಬರುವ ಸವಾಲುಗಳು ಹಾಗೂ ಪಕ್ಷದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಗಳ ಕುರಿತು ವಿವರಿಸಿ, ತಳಮಟ್ಟದಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವಂತೆ ಸಲಹೆ ನೀಡಿದರು.ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ಪ್ರದೇಶಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಪಕ್ಷದ ಸಂದೇಶವನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಲಿಷ್ಠ ಪಕ್ಷ ಸಂಘಟನೆಯನ್ನು ನಿರ್ಮಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಪಕ್ಷದ ಬೆಳವಣಿಗೆ ಹಾಗೂ ಜನಪರ ಹೋರಾಟಗಳಲ್ಲಿ ಕಾರ್ಯಕರ್ತರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಪಕ್ಷದ ತತ್ವ, ಸಿದ್ಧಾಂತ ಮತ್ತು ಜನಸೇವೆಯ ಆಶಯಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಹಾಗೂ ಪಕ್ಷದ ನಾಯಕತ್ವದ ಮಾರ್ಗದರ್ಶನದಲ್ಲಿ ಕಾರ್ಯಕರ್ತರು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ರಹ್ಮಾನ್ ನಾವೂರು, ಬೆಳ್ತಂಗಡಿ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಕೋಶಾಧಿಕಾರಿ ಸ್ವಾಲಿಹ್ ಮದ್ದಡ್ಕ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಖಾದರ್ ನಾವೂರು ಸ್ವಾಗತಿಸಿ ಅಶ್ರಫ್ ಚಾರ್ಮಾಡಿ ನಿರೂಪಿಸಿದರು.

Related posts

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಕರ್ನಾಟಕ ರಾಜ್ಯ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಮೈಸೂರು ಜಿಲ್ಲಾ ವೆಯಿಟ್ ಲಿಫ್ಟಿಂಗ್ ಅಸೋಸಿಯೇಷನ್ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

Suddi Udaya

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya
error: Content is protected !!