24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘ ಮತ್ತು ವಿವಿಧ ಸಂಘಟನೆ ನೇತೃತ್ವದಲ್ಲಿಟೀಮ್ ಈಶ್ವರ ಮಲ್ಪೆ ಸಹಯೋಗದಲ್ಲಿ ಉಚಿತ ಕಿವಿಯ ಶ್ರವಣ ತಪಾಸಣಾ ಶಿಬಿರ

ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,ಬೆಳ್ತಂಗಡಿ ಲಯನ್ಸ್ ಕ್ಲಬ್, ಬೆಳ್ತಂಗಡಿ ವರ್ತಕರ ಸಂಘ, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘ ನಿಯಮಿತ ನೇತೃತ್ವದಲ್ಲಿ ಟೀಮ್ ಈಶ್ವರ್ ಮಲ್ಪೆ ಸಹಯೋಗದೊಂದಿಗೆ ಜೂ. 7 ರಂದು ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತಣಾ ಕಾರ್ಯಕ್ರಮ ಬೆಳ್ತಂಗಡಿ ಲಯನ್ಸ್‌ ಭವನದಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ. ವಹಿಸಿದ್ದರು. ಬೆಳ್ತಂಗಡಿ ಲಯನ್ಸ್‌ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬ‌ರ್ ಅಧ್ಯಕ್ಷ ಜಾನ್ ಅರ್ವಿನ್ ಡಿಸೋಜ, ಬೆಳ್ತಂಗಡಿ ವರ್ತಕರ ಸಂಘದ ಉಪಾಧ್ಯಕ್ಷ ಶಶಿಧರ ಪೈ, ಬೆಳ್ತಂಗಡಿ ಪ್ರೇರಣಾಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ಅಧ್ಯಕ್ಷ ಲ್ಯಾನ್ಸಿ ಪಿರೇರಾ, ಶ್ರವಣ ತಜ್ಞ ಡಾ| ಪವನ್ ಮಂಗಳೂರು,ಟೀಮ್ ಈಶ್ವರ ಮಲ್ಪೆ ಸಂಚಾಲಕ ಲವ ಬಂಗೇರ ಭಾಗವಹಿಸಿದ್ದರು. ಬೆಳ್ತಂಗಡಿ ಪ್ರೆಸ್ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಸ್ವಾಗತಿಸಿದರು.ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಮನೋಹರ ಬಳಂಜ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

Related posts

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya
error: Content is protected !!