ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ಹಾಗೂ ವೆನ್ಲಾಕ್ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ

ಪಡಂಗಡಿ: ನಿಶಾಂತ್ ಸೇವಾ ಬ್ರಿಗೇಡ್ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡಂಗಡಿಯಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರವು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶೇಖರ್ ಕುಕ್ಕೇಡಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಸಂತೋಷ್ ಕುಮಾರ್ ಜೈನ್ ಮಾಜಿ ಪಂಚಾಯತ್ ಅಧ್ಯಕ್ಷರು, ರಕ್ಷಿತ್ ಬಜಿರೆ ಮಾಲಕರು ಶ್ರೀ ದುರ್ಗ ಇನ್ಸೂರೆನ್ಸ್ ವೇಣೂರು, ಪ್ರೇಮಲತಾ ಶಿಕ್ಷಕಿ, ಡಾ. ಸಂಜತ್, ಡಾ. ದೀಪಿಕಾ, ಡಾ. ಅಂತೋಣಿ, ಸುಧಾಕರ ಪೂಜಾರಿ ನೂಯಿ, ಸನತ್ ಹಾಗೂ ಸಂಪತ್ ಅಂಚನ್ ಕುಕ್ಕೇಡಿ, ಅರುಣ್ ಪೂಜಾರಿ ಗರ್ಡಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಒಟ್ಟು 75 ಮಂದಿ ರಕ್ತದಾನ ಮಾಡಿ ಮಾನವೀಯ ಸೇವೆಯ ಮಹತ್ವವನ್ನು ಸಾರಿದರು. ರಕ್ತದಾನಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮದ ಯಶಸ್ಸಿಗೆ ಕಾರಣವಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಮುನೀರ್ ಅವರು ನಿರ್ವಹಿಸಿದರು. ನಿಶ್ಚಿತ್ ಗರ್ಡಾಡಿ ವಂದನಾರ್ಪಣೆ ಸಲ್ಲಿಸಿದರು.

ನಿಶಾಂತ್ ಸೇವಾ ಬ್ರಿಗೇಡ್‌ನ ಎಲ್ಲಾ ಸದಸ್ಯರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಶಿಬಿರದ ಯಶಸ್ಸಿಗೆ ಶ್ರಮಿಸಿದರು.

Related posts

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮದ ಬಳಿ ಗುಡ್ಡದಲ್ಲಿ ಅಪರಿಚಿತ ಮಾನವ ದೇಹದ ತಲೆಬುರುಡೆ ಹಾಗೂ ಮೂಳೆಗಳು ಪತ್ತೆ :ಆಶ್ರಮದಿಂದ ಕಾಣೆಯಾಗಿದ್ದ ವ್ಯಕ್ತಿಯದೆಂದು ಶಂಕೆ

Suddi Udaya

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನಡ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ದಫನ ಮಾಡಿದ ವ್ಯಕ್ತಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

Suddi Udaya
error: Content is protected !!