July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಗುರುವಾಯನಕೆರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ “ಕಟ್ಟದ ಬೈಲು ಒಕ್ಕೂಟ ಗುರುವಾಯನಕೆರೆ ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ). ಇವರ ಸಂಯುಕ್ತ ಆಶ್ರಯದಲ್ಲಿ “ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ಮಾಹಿತಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟದಬೈಲು ನಲ್ಲಿ ನಡೆಯಿತು.

ಒಕ್ಕೂಟದ ಅಧ್ಯಕ್ಷ ರಘು ಆಚಾರ್ಯ ದೀಪ ಪ್ರಜ್ವಲನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್,ಡಿ.ಎಂ ಕಾಲೇಜು ಉಪನ್ಯಾಸಕ ದಿವಾಕರ್ ಕೆ ರವರು ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ನೀಡಿ ತಂಬಾಕು, ಗುಟ್ಕಾ, ಗಾಂಜಾ, ಡ್ರಗ್ಸ್ ಮುಂತಾದವುಗಳಿಂದ ಮಕ್ಕಳು ದಾರಿ ತಪ್ಪುವುದನ್ನು ತಡೆಗಟ್ಟುವಂತೆ ಹಾಗೂ ಕ್ಯಾನ್ಸರ್ ಕಾಯಿಲೆಯ ಬಗ್ಗೆ ಜನರಿಗೆ ಅರಿವು ಮೂಡುವಂತೆ ಉತ್ತಮ ಮಾಹಿತಿಯನ್ನು ನೀಡಿದರು.

ವಲಯದ ಮೇಲ್ವಿಚಾರಕಕಿ ಶ್ರೀಮತಿ ರೇಖಾ ಅವರು ವಿಶ್ವ ತಂಬಾಕು ವಿರೋಧಿ ದಿನಾಚರಣೆಯ ಬಗ್ಗೆ ಮಾಹಿತಿಯನ್ನು ನೀಡುತ್ತಾ ಯೋಜನೆಯ ಕಾರ್ಯಕ್ರಮಗಳು, ಸಂಪೂರ್ಣ ಸುರಕ್ಷಾ, ಪ್ರಗತಿ ರಕ್ಷಾ ಕವಚ, ಸಾಲದ ಮರುಪಾವತಿ ಚೀಟಿ ಅನುಷ್ಠಾನ, ಮಾಡುವುದರ ಬಗ್ಗೆ, ಸಂಘಗಳ ಖಾತೆ ರಿನಿವಲ್ ಬಗ್ಗೆ ಹಾಗೂ ಯೋಜನೆಯಿಂದ ಜನಸಾಮಾನ್ಯರಿಗೆ ಸಿಗುವ ಸೌಲಭ್ಯ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘಗಳ ಸದಸ್ಯರು, ಸೇವಾಪ್ರತಿನಿಧಿ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!