ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಸುಲ್ಕೇರಿ: ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿ ಬ್ರಹ್ಮಗಿರಿ ಸುಲ್ಕೇರಿ ಇವರ ವತಿಯಿಂದ ಬಿಲ್ಲವ ಸಮಾಜದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಮುಖ್ಯ ಅತಿಥಿಯಾದ ಶ್ರೀಮತಿ ಪುಷ್ಪಾ ನಿತ್ಯಾನಂದ ನಾವರ ರವರು ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ಮತ್ತು ಸಂಸ್ಕೃತಿ ನೀಡಬೇಕು ಎಂದರು.

ನಾವೆಲ್ಲರೂ ಒಮ್ಮೆಯಾದರೂ ಶಿವಗಿರಿಗೆ ಭೇಟಿ ನೀಡಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು ಹಾಗೂ ಮಕ್ಕಳಿಗೂ ಈ ಬಗ್ಗೆ ತಿಳುವಳಿಕೆ ಮಾಡಿಸುವ ಜವಾಬ್ದಾರಿ ಪೋಷಕರಿಗೆ ಇರಬೇಕೆಂದು ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಸಂಕೇತ ಪೂಜಾರಿ ತಿಳಿಸಿದರು,

ಕಾರ್ಯಕ್ರಮದ ಅಧ್ಯಕ್ಷ ವಸಂತ ಪೂಜಾರಿ ಮಾತಾಡಿ ಪುಸ್ತಕ ಪಡಕೊಂಡ ಎಲ್ಲಾ ಮಕ್ಕಳು ಉತ್ತಮ ವಿದ್ಯಾಭ್ಯಾಸ ಪಡೆದು ಸಮಾಜದಲ್ಲಿ ಉತ್ತುಂಗಕ್ಕೆ ಏರುವಂತಾಗಲಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕುತ್ಲೂರು ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ , ಸುಲ್ಕೇರಿಯ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯ ಗೌರವಾಧ್ಯಕ್ಷ ಸುಧೀರ್ ಎಸ್ .ಪಿ, ನಿಕಟಪೂರ್ವ ಅಧ್ಯಕ್ಷ ಕೊರಗಪ್ಪ ಪೂಜಾರಿ ಉಪಾಧ್ಯಕ್ಷ ಶಂಕರ ಪೂಜಾರಿ ಉಪಸ್ಥಿತರಿದ್ದರು. ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು. ವಿಶ್ವನಾಥ ಪೂಜಾರಿ ಸ್ವಾಗತಿಸಿದರು, ವಸಂತಿ ಧನ್ಯವಾದವಿತ್ತರು.

Related posts

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya

ತೋಡಿನಂತಿರುವ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ : ಭಯಾನಕ ಗುಂಡಿಗಳಿಗೆ ತೇಪೆ ಕಾರ್ಯ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

Suddi Udaya
error: Content is protected !!