ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಜೂ.14: ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಿಲಾನ್ಯಾಸ ಕಾರ್ಯಕ್ರಮ

ಪತ್ರಿಕಾಗೋಷ್ಠಿ,
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಅತೀ ದೊಡ್ಡ, 81 ಗ್ರಾಮಗಳನ್ನು ಒಳಗೊಂಡ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ, ಸುಮಾರು 23.00 ಕೋಟಿ ರೂಪಾಯಿಗಳ ಬೇಡಿಕೆಯನ್ನು ಈಗಾಗಲೇ ಸಲ್ಲಿಸಿದ್ದು, ಮೊದಲ ಹಂತದಲ್ಲಿ 9.00 ಕೋಟಿ ಬಿಡುಗಡೆಗೊಳಿಸಿದ್ದು ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಕಾರ್ಯಕ್ರಮವು ಜೂ.14 ರಂದು ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಹೇಳಿದರು.

ಅವರು ಜೂ.8ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ನೂತನ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆಯನ್ನು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮಹಮ್ಮದ್ ನವಾಜ್ ರವರ ಉಪಸ್ಥಿತಿಯಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಆಡಳಿತತ್ಮಾಕ ನ್ಯಾಯಾಧೀಶರಾದ ಎಚ್.ಟಿ. ನರೇಂದ್ರ ಪ್ರಸಾದ್‌ರವರು ನಡೆಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿ ಹೊಳಿಯವರು ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕರ್ನಾಟಕ ಸರಕಾರದ ಆರೋಗ್ಯ ಇಲಾಖೆಯ ಸಚಿವ ಯು.ಟಿ ಖಾದರ್, ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ. ವಿಶ್ವಜಿತ್ ಶೆಟ್ಟಿ, ರಾಜೇಶ್ ರೈ.ಕೆ, ತ್ಯಾಗರಾಜ್ ಎನ್. ಇನವಳ್ಳಿ, ಮುರಳೀಧರ ಪೈ, ಸಂಸದರಾದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕರುಗಳಾದ ಐವನ್ ಡಿ ಸೋಜ ಮತ್ತು ಕೆ. ಪ್ರತಾಪ್ ಸಿಂಹ ನಾಯಕ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್‌ನ ಸದಸ್ಯ ಪಿ.ಪಿ ಹೆಗ್ಡೆ ರವರುಗಳು ಭಾಗವಹಿಸಲಿದ್ದಾರೆ.


ಸುಮಾರು 60 ವರ್ಷ ಹಳೆಯದಾದ ಹಳೆಯ ನ್ಯಾಯಾಲಯದ ಕಟ್ಟಡ ಸೋರುತ್ತಿದ್ದು. ನಾದುರಸ್ತಿಗೆ ತಲುಪಿರುತ್ತದೆ. ನೂತನ ನ್ಯಾಯಾಲಯ ಕಟ್ಟಡ ಆಗಬೇಕು ಎಂಬುದು ನಮ್ಮ ಹಲವಾರು ವರ್ಷಗಳ ಬೇಡಿಕೆಯಾಗಿತ್ತು. ಈ ನಿಟ್ಟಿನಲ್ಲಿ ಕಳೆದ 2 ವರ್ಷಗಳಿಂದ ನಾವು ಸರಕಾರದ ಮಟ್ಟದಲ್ಲಿ ಸತತ ಪ್ರಯತ್ನವನ್ನು ನಡೆಸಿದೆವು. ಅದರ ಫಲವಾಗಿ ರಾಜ್ಯ ಸರಕಾರ ನಮ್ಮ ಬೇಡಿಕೆಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ್ದು ವಕೀಲರ ಸಂಘದ ಪರವಾಗಿ ಸರಕಾರಕ್ಕೆ ಹೃತೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ. ನೂತನ ನ್ಯಾಯಾಲಯದ ಕಟ್ಟಡದ ಕಾಮಗಾರಿಯನ್ನು ಕುಬೇರ ಕನ್‌ಸ್ಯಕ್ಷ ನ್ ಮಂಗಳೂರು ಇವರಿಗೆ ಟೆಂಡರ್ ಆಗಿದ್ದು, ಮಂಜೂರಾತಿಗಾಗಿ ನಮಗೆ ವಿಶೇಷ ಸಹಕಾರ ನೀಡಿದ ಹೈಕೋರ್ಟ್ ನ್ಯಾಯವಾದಿ ರಕ್ಷಿತ್ ಶಿವರಾಂ ಮತ್ತು ವಿಧಾನ ಪರಿಷತ್ ಶಾಸಕರುಗಳಾದ ಐವನ್ ಡಿ ಸೋಜ ಮತ್ತು ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಸಂಘದ ಪರವಾಗಿ ಅಭಿಂದನೆಗಳನ್ನು ಹಾಗೂ ಧನ್ಯವಾದವನ್ನು ಸಲ್ಲಿಸುತ್ತಿದ್ದೇನೆ ಎಂದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ನ್ಯಾಯಾಧೀಶರುಗಳು, ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳ ಸರಕಾರಿ ಅಧಿಕಾರಿಗಳು, ಪೋಲಿಸ್ ಇಲಾಖೆ, ಸಂಚಾರಿ ಪೋಲಿಸ್ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ಪದಾಧಿಕಾರಿ, ಸದಸ್ಯರು ಧಾರ್ಮಿಕ ಮುಖಂಡರು ಪತ್ರಕರ್ತ ಬಂಧುಗಳು ಭಾಗವಹಿಸಲಿದ್ದಾರೆ.


ಕಾರ್ಯಕ್ರಮದ ಯಶಸ್ವಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜು ಹಾಗೂ ವಕೀಲರ ಸಂಘದ ಅಧ್ಯಕ್ಷ ಅಲೋಸಿಯಸ್ ಎಸ್ ಲೋಬೊ, ಕಾರ್ಯದರ್ಶಿಯಾದ ಪ್ರಶಾಂತ್ ಎಂ. ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಅಭಿಯಂತರರು ಗೋಕುಲ್ ದಾಸ್, ದಕ್ಷಿಣ ಕನ್ನಡ ಜಿಲ್ಲಾ ಲೋಕೋಪಯೋಗಿ ಇಲಾಖೆ ಮಂಗಳೂರು ಕಾರ್ಯನಿರ್ವಾಹಕರಾದ ಅಭಿಯಂತರರು ರಾಘವೇಂದ್ರ ನಾಯ್ಕ ಹಾಗೂ ಸಂಘದ ಪದಾಧಿಕಾರಿ, ಸದಸ್ಯರು ಶ್ರಮಿಸುತ್ತಿದ್ದಾರೆ.
ಕಾರ್ಯಕ್ರಮದ ಯಶಸ್ಸಿಗೆ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿಗಳನ್ನೊಳಗೊಂಡ ವಿವಿಧ ಸಮಿತಿಗಳನ್ನು ರಚಿಸಿ ತಮ್ಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರ ಸಂಘದ ಅಧ್ಯಕ್ಷ ಶಿವಕುಮಾರ್ ಎಸ್.ಎಂ., ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ್ ಗೌಡ, ಮಾಜಿ ಅಧ್ಯಕ್ಷ ವಸಂತ ಮರಕಡ, ಮಾಜಿ ಕಾರ್ಯದರ್ಶಿ ನವೀನ್ ಬಿ.ಕೆ, ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಉಪಸ್ಥಿತರಿದ್ದರು. ಪ್ರದಾನ ಕಾರ್ಯದರ್ಶಿ ಪ್ರಶಾಂತ್ ಎಂ. ಸ್ವಾಗತಿಸಿದರು.

Related posts

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಮಾನಹಾನಿಕಾರಕ ಸುದ್ದಿ ಹರಡಿ ತೇಜೋವಧೆ ಆರೋಪ:ಶೇಖರ್ ಲಾಯಿಲ ವಿರುದ್ಧ ಬ್ಲಾಕ್ ಕಾಂಗ್ರೆಸ್ ಉಭಯ ಘಟಕಗಳ ಅಧ್ಯಕ್ಷರು ಹಾಗೂ ಯೂತ್‌ಕಾಂಗ್ರೆಸ್ ಜಿಲ್ಲಾ ಸಮಿತಿ ಕಾರ್ಯದರ್ಶಿಯಿಂದ ಪೊಲೀಸರಿಗೆ ದೂರು

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಖೋ-ಖೋ ಪಂದ್ಯಾಟ: ಬಜಿರೆ ಪಿ.ಎಂ.ಶ್ರೀ ಸ.ಉ.ಹಿ.ಪ್ರಾ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!