24.2 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

ಬೆಳ್ತಂಗಡಿ; ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಪ್ರಕರಣಕಕ್ಕೆ ಸಂಬಂಧಪಟ್ಟಂತೆ ಇಬ್ಬರು ಅಂತರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಕೊಳ್ಳಾಡು ನಿವಾಸಿ ಹಮೀದ್, ಬಂಟ್ವಾಳ ಕೊಳ್ಳಾಡು ನಿವಾಸಿ (ಹಾಲಿ ವಾಸ: ಕಾಸರಗೋಡು) ಜಾಬೀರ್ @ಜಾಬೀ (38) ಬಂಧಿತ ಆರೋಪಿಗಳಾಗಿದ್ದು ಇವರಿಂದ ಸುಮಾರು 23.67 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ: 05.04.2026 ರಂದು ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಬಳ್ಳಮಂಜದ ಮನೆಯಲ್ಲಿ 6 ಲಕ್ಷ ಹಣ ಮತ್ತು ಚಿನ್ನಾಭರಣ ಸೇರಿ 19 ಲಕ್ಷದ ಕಳ್ಳತನ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆಭದಲ್ಲಿ ಕೋಲ್ನಾಡು ನಜಲಿವಾಸಿ ಹಮೀದ್ ನನ್ನು ಬಂಧಿಸಿದ ಪೊಲೀಸರು ಆತನಿಂದಕೃತ್ಯಕ್ಕೆ ಉಪಯೋಗಿಸಿದ ಕಾರನ್ನು ವಶಪಡಿಸಿಕೊಂಡಿದ್ದರು ಈತನಿಂದ ಲಭಿಸಿದ ಮಾಹಿತಿಯ ಆದಾರದ ಮೇಲೆ ದಿನಾಂಕ: 07-06-2026 ರಂದು ಆರೋಪಿ ಜಾಬೀರ್ @ಜಾಬೀ (38) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಪುಂಜಾಲಕಟ್ಟೆ ಠಾಣಾ ಅ.ಕ್ರ: 38/2026 ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 68.690 ಗ್ರಾಂ ಚಿನ್ನಾಭರಣ ಹಾಗೂ ರೂ 2,00,000/- ನಗದು ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ: 28/2025 ಪ್ರಕರಣಕ್ಕೆ ಸಂಬಂಧಿಸಿದ 21.810 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಸೊತ್ತುಗಳ ಒಟ್ಟು ಮೌಲ್ಯ ರೂ.23,67,000/- ಗಳಾಗಿರುತ್ತದೆ.

ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಈ ಪ್ರಕರಣಗಳನ್ನು ಹೊರತುಪಡಿಸಿದಂತೆ ಆರೋಪಿಗಳು ಉಪ್ಪಿನಂಗಡಿ ಠಾಣೆ, ಬಂಟ್ವಾಳ ನಗರ ಠಾಣೆ ಹಾಗೂ ಬೆಳ್ತಂಗಡಿ ಠಾಣೆಯಲ್ಲಿ ತಲಾ ಒಂದು ಪ್ರಕರಣ ಸೇರಿದಂತೆ ಒಟ್ಟು 05 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದ್ದು ತನಿಖೆ ಮುಂದುವರಿಯುತ್ತದೆ.

ಈ ಪ್ರಕರಣದ ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಉಪವಿಭಾಗಾಧೀಕ್ಷಕರಾದ ಶ್ರೀಮತಿ ರೋಹಿಸಿ ಸಿ.ಕೆ ರವರ ನೇತ್ರತ್ವದಲ್ಲಿ, ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್, ಉಪ್ಪಿನಂಗಡಿ ಗ್ರಾಮಾಂತರ ಸಿ.ಪಿ.ಐ ನಾಗರಾಜ್ ಹೆಚ್.ಇ, ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ, ಸಿಬ್ಬಂದಿಗಳಾದ ಏ.ಎಸ್.ಐ ಬೆನ್ನಿಚ್ಚನ್, ಏ.ಎಸ್.ಐ ಸುಂದರ ಶೆಟ್ಟಿ, ಏ.ಎಸ್.ಐ ವಿಶ್ವನಾಥ್ ನಾಯ್ಕ, ಪ್ರವೀಣ್ ಮೂರುಗೋಳಿ, ರಾಜೇಶ್ ಎನ್, ವಿಜಯ್ ಕುಮಾ‌ರ್ ರೈ, ರಾಹುಲ್ ರಾವ್, ಸಂತೋಷ್, ಬಸವರಾಜ್, ರಜಿತ್, ನಾಗರಾಜ್ ರವರು ಭಾಗಿಯಾಗಿದ್ದು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ರವರು ಸಹಕರಿಸಿರುತ್ತಾರೆ.

Related posts

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya
error: Content is protected !!