30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಲಯ ಕಟ್ಟಡಕ್ಕೆ ಅನುದಾನ ಒದಗಿಸುವಲ್ಲಿ ಸಹಕರಿಸಿದ ರಕ್ಷಿತ್ ಶಿವರಾಮ್ ರವರಿಗೆ ಅಭಿನಂದನೆ: ಸಂತೋಷ್ ಕುಮಾರ್ ಲಾಯಿಲ

ಬೆಳ್ತಂಗಡಿ ನ್ಯಾಯಾಲಯದ ನೂತನ ಕಟ್ಟಡ 23 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಈಗಾಗಲೇ ರಾಜ್ಯ ಸರ್ಕಾರ ಮೊದಲ ಹಂತದ ಕಾಮಗಾರಿಗೆ 9 ಕೋಟಿ ರೂ ಅನುದಾನ ಮಂಜೂರು ಮಾಡಿದೆ. ಹಲವು ವರ್ಷಗಳಿಂದ ನ್ಯಾಯವಾದಿಗಳ ಸಂಘ ಹಾಗೂ ಸಾರ್ವಜನಿಕರು ಸಲ್ಲಿಸುತ್ತಿದ್ದ ಬೇಡಿಕೆಗೆ ಇದೀಗ ರಾಜ್ಯ ಸರಕಾರದಿಂದ ಸ್ಪಂದನೆ ದೊರೆತಿದ್ದು, ಜೂ.14 ರಂದು ಬೆಳ್ತಂಗಡಿ ನೂತನ ನ್ಯಾಯಾಲಯದ ಶಂಕುಸ್ಥಾಪಣೆಯಾಗಲಿದ್ದು ಬಹುಕಾಲದ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.

ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಕ್ಕಾಗಿ ಬೆಳ್ತಂಗಡಿ ವಕೀಲರ ಸಂಘ ಕಳೆದ 10 – 12 ವರ್ಷಗಳಿಂದ ನಿರಂತರವಾಗಿ ಈ ಹಿಂದಿನ ಸರ್ಕಾರಗಳ ಗಮನ ಸೆಳೆಯುತ್ತಾ ಬಂದಿದೆ.

ಈ ಕುರಿತು ಹಿಂದಿನ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೋಳಿ ಬಳಿ ವಕೀಲರ ನಿಯೋಗವನ್ನು ಕರಕೊಂಡು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ಇವರು ಮನವಿಗಳನ್ನು ನೀಡಿದ್ದರ ಫಲವಾಗಿ ರಾಜ್ಯ ಸರಕಾರದಿಂದ ಅನುದಾನವನ್ನು ಒದಗಿಸಿರುವುದರಲ್ಲಿ ಸಫಲರಾದ ರಕ್ಷಿತ್ ಶಿವರಾಮ್ ಅವರಿಗೆ ಜಿಲ್ಲಾ ಕೆ.ಡಿ.ಪಿ ಸದಸ್ಯನಾಗಿ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸದಸ್ಯನಾಗಿ ಹೃತ್ತೂರ್ವಕ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

ಅಲ್ಲದೆ ವಿಧಾನಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಹಾಗೂ ಐವನ್ ಡಿಸೋಜ ಅವರು ವಿಧಾನಮಂಡಲ ಅಧಿವೇಶನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದದ್ದಾಕ್ಕಾಗಿ ಅಬಿನಂದಿಸುತ್ತೇನೆ ಎಂದು ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ ತಿಳಿಸಿದ್ದಾರೆ

Related posts

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
error: Content is protected !!