25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ಅಧ್ಯಕ್ಷತೆ ವಹಿಸಿ ಮಾತನಾಡಿ ಮಕ್ಕಳಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಿ ಪ್ರತಿ ಮನೆಯಲ್ಲಿ ಒಂದೊಂದು ಗಿಡ ನೆಡಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ನೆರಿಯ ವಲಯದ ಅರಣ್ಯ ಅಧಿಕಾರಿ ರವಿಚಂದ್ರ ರವರು ಪರಿಸರ ನಾಶದಿಂದ ಏನೆಲ್ಲ ಅನಾಹುತಗಳಾಗುತ್ತವೆ ಮತ್ತು ಪರಿಸರದ ಸಂರಕ್ಷಣೆ ಯಾವ ರೀತಿ ಮಾಡಬೇಕು ಎಂಬ ವಿಚಾರದ ಬಗ್ಗೆ ಸುದೀರ್ಘವಾಗಿ ಮಾಹಿತಿ ತಿಳಿಸಿಕೊಟ್ಟರು.

ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುದುವೆಟ್ಟು ವಲಯದ ಮೇಲ್ವಿಚಾರಕರಾದ ರವೀಂದ್ರರವರು, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ ಗುಂಪಕಲ್ಲು, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕರಾದ ಗೌರೀಶ್ ರವರು ವಿಶ್ವ ಪರಿಸರ ದಿನದ ಮಹತ್ವ ಮತ್ತು ಹಿನ್ನೆಲೆಯನ್ನು ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರುಗಳು ಉಪಸ್ಥಿತರಿದ್ದು ಗಿಡ ನೆಡಲು ಸಹಕರಿಸಿದರು. ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಪುಷ್ಪಲತಾ ಸ್ವಾಗತಿಸಿ, ಶೀಲಾ ಎನ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಜಿತೀಕ್ಷಾ ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಬಜಿರೆ: ಚಿರತೆ ಹಾವಳಿಗೆ ಬೋನ್ ಇರಿಸಿದ ಅರಣ್ಯ ಇಲಾಖೆ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 139ರ ಅಧ್ಯಕ್ಷರಾಗಿ ಚಂದ್ರಶೇಖರ, ಕಾರ್ಯದರ್ಶಿಯಾಗಿ ರಮಾನಾಥ ಪೂಜಾರಿ ಆಯ್ಕೆ

Suddi Udaya
error: Content is protected !!