30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 9.ರಂದು ಬಿಜೆಪಿ ಕಚೇರಿಯಲ್ಲಿ ಮಹಿಳಾ ಮೋರ್ಚಾದ ಸಭೆ ನಡೆಯಿತು.

ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್ ಭಾಗವಹಿಸಿ, ತೀವ್ರ ಮತಪಟ್ಟಿ ಪರಿಷ್ಕರಣೆಯ ಮುಂದಿನ ಕಾರ್ಯ ಯೋಜನೆ ಬಗ್ಗೆ, ಪ್ರವಾಸ ಪ್ರಮುಖ, ಮನ್ ಕಿ ಬಾತ್ ಪ್ರಮುಖ್ ರನ್ನು ಆಯ್ಕೆ ಮಾಡುವ ಬಗ್ಗೆ, ಮಂಗಳೂರಿನಲ್ಲಿ ನಡೆಯುವ ಅಭಿನಂದನಾ ಸಭೆಯ ಬಗ್ಗೆ, ಮೋದಿಜಿಯ 12 ವರ್ಷದ ಆಡಳಿತದ ಸಂಭ್ರಮಾಚರಣೆಯನ್ನು ಆಚರಿಸುವ ಬಗ್ಗೆ ,ಹೀಗೆ ಸಂಘಟನಾತ್ಮಕ ಮಾಹಿತಿಯನ್ನು ನೀಡಿದರು.

ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದರು. ಜಿಲ್ಲಾ ಮನ್ ಕಿ ಬಾತ್ ಪ್ರಮುಖರಾದ ಸೀತಾರಾಮ್ ಮನ್ ಕಿ ಬಾತ್ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಲಖೀತ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರು ಮಂಡಲ ಪ್ರಭರಿಗಳು ಕಮಲಾಕ್ಷಿ, ಜಿಲ್ಲಾ ಭಾಜಪ ಕಾರ್ಯದರ್ಶಿ ಶ್ರೀಮತಿ ವಸಂತಿ ಲಕ್ಷ್ಮಣ್ ,ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅಮಿತಾ ಕುಶಾಲಪ್ಪ ಗೌಡ , ಜಿಲ್ಲಾ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ ಸಿ ಕೆ, ಮಂಡಲ ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ನಾಯಕ್ ಮತ್ತು ಮಹಿಳಾ ಮೋರ್ಚದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಉಮೇಶ್ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಜಯಂತ್ ಧನ್ಯವಾದವಿತ್ತರು.

Related posts

ಕಕ್ಯಪದವು ಎಲ್‌.ಸಿ.ಆರ್ ಇಂಡಿಯನ್ ಪ.ಪೂ. ಕಾಲೇಜು ವಾಣಿಜ್ಯ ವಿಭಾಗದಲ್ಲಿ ಶೇ. 100 ಫಲಿತಾಂಶ ದಾಖಲು

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಆಹಾರೋತ್ಸವ, ವಸ್ತು ಪ್ರದರ್ಶನ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!