29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ, ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ ನಡೆಯಿತು.

ಕೀರ್ತಿ ಜ್ಞಾನವಿಕಾಸ ಕೇಂದ್ರದಲ್ಲಿ ಮೇಲ್ವಿಚಾರಕರಾದ ರಾಮ್ ಕುಮಾರ್ ಮಾಹಿತಿಯನ್ನು ನೀಡುತ್ತಾ ಕುಟುಂಬದಲ್ಲಿ ಅತೀ ಮುಖ್ಯವಾಗಿ ತಾಯಿಯು ಮನೆಯ ಎಲ್ಲಾ ಸದಸ್ಯರನ್ನು ಸಮಾನತೆಯಲ್ಲಿ ಪ್ರೀತಿಯಿಂದ ನೋಡಿಕೊಂಡಾಗ, ಮಕ್ಕಳು ಮತ್ತು ಮನೆಯವರು ಕೂಡ ಪರಸ್ಪರ ಹೊಂದಾಣಿಕೆಯೊಂದಿಗೆ ಪ್ರತಿಯೊಂದು ವಿಚಾರಗಳನ್ನು ಮುಕ್ತವಾಗಿ ಮಾತನಾಡಿಕೊಂಡು, ಸಮಾನವಾಗಿ ಸ್ವೀಕರಿಸಿ ಬದುಕನ್ನು ಕಟ್ಟಿಕೊಂಡಾಗ ಆ ಮನೆಯ ಸಮಾಜದಲ್ಲಿ ಮಾದರಿಯಾಗಿ ನಡೆದುಕೊಳ್ಳಬೇಕು. ರಾಜ್ಯದ್ಯಂತ ಇಂದು ಜ್ಞಾನವಿಕಾಸ ಕೇಂದ್ರದ ಮೂಲಕವಾಗಿ ಮಹಿಳೆಯರ ಸಾಮಾಜಿಕವಾಗಿ ಆರ್ಥಿಕ ಸಬಲೀಕರಣದೊಂದಿಗೆ ಪ್ರಗತಿಯನ್ನು ಹೊಂದಿದ್ದು,ಸಮಾಜದಲ್ಲಿಯೇ ಮಾದರಿಯಾಗಿದೆ ಎಂದರು.

ಈ ಸಂದರ್ಭ ಮೇಲ್ವಿಚಾರಕಿ ಶ್ರುತಿ,ಜ್ಞಾನವಿಕಾಸ ಕೇಂದ್ರದ ಸಂಯೋಜಕಿ ತಾರ ,ಸೇವಾಪ್ರತಿನಿಧಿ ಲೀಲಾವತಿ ಉಪಸ್ಥಿತರಿದ್ದರು,. ದುರ್ಗಾಪರಮೇಶ್ವರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡರು, ಶ್ರೀಮತಿ ವೇದಾವತಿ ಸ್ವಾಗತಿಸಿದರು, ಸೀತಾ ರವರು ಜ್ಞಾನವಿಕಾಸ ಕೇಂದ್ರದ ಮೂಲಕ ತನ್ನ ಬದುಕನ್ನು ಕಟ್ಟಿಕೊಂಡ ಬಗ್ಗೆ ಅನುಭವವನ್ನು ಹಂಚಿಕೊಂಡರು, ಶ್ರೀಮತಿ ನಳಿನಾಕ್ಷಿ ಧನ್ಯವಾದವಿತ್ತರು.

Related posts

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್‌ನಲ್ಲಿ ಕೃಷ್ಣ ಜನ್ಮಾಷ್ಟಮಿ, ಶಿಕ್ಷಕರ ದಿನಾಚರಣೆ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ: ಹಿರಿಯ ಸಂಶೋಧಕ ಡಾ. ಎಸ್.ಡಿ. ಶೆಟ್ಟಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ಬಡೆಕ್ಕಾವುದ ಸತ್ಯೋಲು ಭಕ್ತಿ ಸುಗಿಪು ವೀಡಿಯೋ-ಆಡಿಯೋ ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಬಯಲು ; ಬೆಳ್ತಂಗಡಿ ಪೊಲೀಸರಿಂದ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!