29.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

ಬೆಳ್ತಂಗಡಿ: ಭಾರೀ ಮಳೆ ಸುರಿಯುವ ಸಂದರ್ಭದಲ್ಲಿ ರಸ್ತೆ ಹೊಂಡದಲ್ಲಿ ನೀರು ನಿಂತು ಅಪಘಾತಗಳಾಗಿ ಸಾರ್ವಜನಿಕರ ಪ್ರಾಣ ಹಾನಿ ಸಂಭವಿಸಿದರೆ ಅದಕ್ಕೆ ಸಂಬAಧಿಸಿದ ಇಲಾಖಾ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಎಚ್ಚರಿಕೆ ನೀಡಿದ್ದಾರೆ.

ಮಳೆಗಾಲದ ಸಿದ್ಧತೆಗಳ ಕುರಿತು ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ರಸ್ತೆಯಲ್ಲಿ ನೀರು ನಿಲ್ಲದಂತೆ ಸೂಕ್ತ ಕ್ರಮ ಜರಗಿಸಬೇಕು. ತುರ್ತು ಸಂದರ್ಭ ಸಾರ್ವಜನಿಕ ಹಿತಾಸಕ್ತಿಯಿಂದ ವ್ಯಾಪ್ತಿ ಮೀರಿ ಕ್ರಮಕೈಗೊಳ್ಳಬೇಕು. ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಸಮನ್ವಯದಿಂದ ನಿರ್ವಹಿಸಬೇಕು. ಪದೇ ಪದೇ ಹೊಂಡ ಮುಚ್ಚುವ ಕೆಲಸದ ಬದಲು ಶಾಶ್ವತ ಕಾಮಗಾರಿಗೆ ಒತ್ತು ನೀಡಬೇಕು ಎಂದು ಖಾದರ್ ಸೂಚಿಸಿದರು.

ಮೆಸ್ಕಾಂ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ವಿದ್ಯುತ್ ಸಂಪರ್ಕ ನಿರ್ವಹಣೆಗೆ ಹೆಚ್ಚುವರಿ ಲೈನ್‌ಮ್ಯಾನ್ ಮತ್ತು ವಾಹನಗಳನ್ನು ಒದಗಿಸಬೇಕು. ವಿದ್ಯುತ್ ಸಂಪರ್ಕ ಮರುಸ್ಥಾಪನೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಳೆಗಾಲ ನಿರ್ವಹಣೆಗೆ ಕೈಗೊಳ್ಳಗಿರುವ ಸಿದ್ಧತೆಗಳನ್ನು ಸಭೆಗೆ ವಿವರಿಸಿದರು. ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್, ಡಿಸಿಎಫ್ ರವಿಶಂಕರ್, ಮಂಗಳೂರು ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಮತ್ತಿತರರು ಉಪಸ್ಥಿತರಿದ್ದರು.

Related posts

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!