25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಕಾಲೇಜಿನ ಅಮಿತ್‌ ಕೆ ಜೈನ್ ಅವರಿಗೆ ಪಿ.ಎಚ್.ಡಿ ಪದವಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್ ವಿಭಾಗದ ಉಪನ್ಯಾಸಕ ಅಮಿತ್‌ ಕೆ ಜೈನ್ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿ.ಎಚ್.ಡಿ ಪದವಿ ಪ್ರದಾನ ಮಾಡಿದೆ.

ಇವರು ಮೈಸೂರಿನ ವಿದ್ಯಾವರ್ಧಕ ಕಾಲೇಜಿನ ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್ ವಿಭಾಗದ ಪ್ರಾಧ್ಯಾಪಕರಾದ ಪ್ರೋ. ನವೀನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ “Facial Expression Classification Through Machine Learning Algorithms: Extracting Discernible Patterns for Enhanced Recognition” ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧವನ್ನು ಯಶಸ್ವಿಯಾಗಿ ಮಂಡಿಸಿದ್ದರು.

ಅಮಿತ್‌ ಕೆ ಜೈನ್ ಅವರು ಸಂಸೆಯ ಕೀರ್ತಿ ಜೈನ್ ಮತ್ತು ಕಲ್ಪನಾ ಕೆ ಜೈನ್ ದಂಪತಿಯ ಪುತ್ರರಾಗಿದ್ದಾರೆ. ಇವರ ಈ ಶೈಕ್ಷಣಿಕ ಸಾಧನೆಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಪ್ರಾಂಶುಪಾಲ ಡಾ. ಅಶೋಕ್‌ಕುಮಾರ್, ಅಧ್ಯಾಪಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಸ್ಕೂಟಿಗೆ- ಆಟೋ ರಿಕ್ಷಾ ಡಿಕ್ಕಿ ಪ್ರಕರಣ: ಆಟೋ ಚಾಲಕನಿಗೆ ಕಾರಾಗೃಹ ಶಿಕ್ಷೆ ಪ್ರಕಟ

Suddi Udaya

ಬಂದಾರು: ಕುಂಟಾಲಪಲ್ಕೆ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಪುನರ್ ರಚನೆ

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

Suddi Udaya
error: Content is protected !!