30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ವತಿಯಿಂದ ಸ್ವಚ್ಛತಾ ಕಾರ್ಯಕ್ಕಾಗಿ ಟಿಪ್ಪರ್ ಕೊಡುಗೆ

ಧರ್ಮಸ್ಥಳ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಉಡುಪಿ ಜಿಲ್ಲೆಯ ಕಡೆಕಾರ್ ಗ್ರಾಮ ಪಂಚಾಯಿತಿಯ ಸ್ವಚ್ಛತಾ ಕಾರ್ಯಕ್ಕಾಗಿ ಘನತ್ಯಾಜ್ಯ ವಿಲೇವಾರಿ ವಾಹನ ಟಾಟಾ 407 ಟಿಪ್ಪರ್ ಅನ್ನು ಕೊಡುಗೆಯಾಗಿ ನೀಡಿದರು.

ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್, ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್ ಸಮ್ಮುಖದಲ್ಲಿ ಘನತ್ಯಾಜ್ಯ ವಿಲೇವಾರಿ ವಾಹನದ ಕೀಲಿ ಕೈ ಹಸ್ತಾಂತರಿಸಿ, ವಾಹನವು ಗ್ರಾಮದ ಸ್ವಚ್ಛತಾ ಕಾರ್ಯಗಳಿಗೆ ಸದ್ಬಳಕೆ ಆಗಲಿ ಎಂದು ಶುಭ ಹಾರೈಸಿದರು.

ಈ ವೇಳೆ ಉಡುಪಿ ಆಯುರ್ವೇದ ಕಾಲೇಜಿನ ಉಪ ಪ್ರಾಂಶುಪಾಲರಾದ ಪ್ರೊ . ನಾಗರಾಜ ಪೂಜಾರಿ, ಉಡುಪಿ ಎಸ್.ಡಿ. ಎಂ ಆಸ್ಪತ್ರೆಯ ಮೆಡಿಕಲ್ ಸುಪರಿಡೆಂಟ್ ಡಾ. ಜಯಕೃಷ್ಣ ನಾಯಕ್, ಉಡುಪಿಯ ಎಸ್.ಡಿ.ಎಂ ಫಾರ್ಮಸಿಯ ಜನರಲ್ ಮ್ಯಾನೇಜರ್ ಡಾ. ಮುರಳೀಧರ ಬಳ್ಳಾಳ್ ಹಾಗು ಉಜಿರೆ ಎಸ್.ಡಿ.ಎಂ ಕೇಂದ್ರ ಕಛೇರಿಯ ಸಿಬ್ಬಂದಿ ನಿಶಿತ್ ಕುಮಾರ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಿದ್ದೇಶ್ ಮಾತನಾಡಿ, ಕಡೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕುತ್ಪಾಡಿ ಗ್ರಾಮದ ಶ್ರೀ ಧರ್ಮಸ್ಥಳ ಮಂಜುನಾಥ ಆಯುರ್ವೇದ ಆಸ್ಪತ್ರೆ ಪಂಚಾಯತ್ ವ್ಯಾಪ್ತಿಯಲ್ಲಿನ ಹಾಗು ಸುತ್ತಲಿನ ಪ್ರದೇಶಗಳ ಜನರ ಆರೋಗ್ಯ ಸಂಬಂಧಿಸಿದ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುತ್ತಿರುವುದನ್ನು ಶ್ಲಾಘಿಸಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯ ವೈಖರಿಗೆ ಮೆಚ್ಚುಗೆಯನ್ನು ‌ವ್ಯಕ್ತಪಡಿಸಿದರು.

ಹಸ್ತಾಂತರ ಸಂದರ್ಭದಲ್ಲಿ ಉಡುಪಿಯ ಕಡೆಕಾರ್ ಗ್ರಾಮ ಪಂಚಾಯಿತಿಯ ಪಿಡಿಒ ಸಿದ್ದೇಶ್, ಪಂಚಾಯತ್ ಉಪಾಧ್ಯಕ್ಷ ನವೀನ್ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ತಾರಾನಾಥ್ ಆರ್. ಸುವರ್ಣ , ರಾಘವೇಂದ್ರ , ಪ್ರಶಾಂತ್ , ಸುಕನ್ಯಾ ಸೇರಿದಂತೆ ಸಿಬ್ಬಂದಿಗಳಾದ ಶಶಿಧರ್ ಬಂಗೇರ, ಮನೋಜ್ ಎಸ್. ಭಾಗಿಯಾಗಿದ್ದರು.

Related posts

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya
error: Content is protected !!