26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ನಾವೂರು ಶಕ್ತಿ ಕೇಂದ್ರದ ವತಿಯಿಂದ ದೇವರಿಗೆ ವಿಶೇಷ ಪೂಜೆ

ನಾವೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಾವೂರು ಶಕ್ತಿ ಕೇಂದ್ರದ ವತಿಯಿಂದ ನಾವೂರಿನ ಶ್ರೀ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಇಂದು(ಜೂ.10) ವಿಶೇಷ ಪೂಜೆ ಸಲ್ಲಿಸಲಾಯಿತು.

ಮುಂದಿನ ದಿನಗಳಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ ಹೆಚ್ಚು ವರ್ಷಗಳ ಕಾಲ ದೇಶದ ಸೇವೆ ಮಾಡಲು ಹಾಗೂ ಅವರಿಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ದೊರೆಯಲಿ ಎಂದು ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಸುವರ್ಣ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸೇವಾಟ್ರಸ್ಟ್ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ನಾವೂರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು ಹಾಗೂ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Related posts

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ನಗರ ಸಮಿತಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೇ 7 : ಜ್ಯೋತಿ ಆಸ್ಪತ್ರೆ, ಲಾಯಿಲ– ತುರ್ತು ಮತ್ತು ಅಪಘಾತ ಚಿಕಿತ್ಸಾ ಆರೈಕೆ ಘಟಕ ಉದ್ಘಾಟನೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಧಾರ್ಮಿಕ ಶ್ರದ್ಧಾ ಕೇಂದ್ರದ ಮೇಲೆ ನಡೆಯುತ್ತಿರುವ ದಾಳಿ ನಿಲ್ಲಬೇಕು. ಕೂಡಲೇ ಎಸ್ ಐ ಟಿ ಸರ್ಕಾರಕ್ಕೆ ಮದ್ಯಂತರ ವರದಿ ಸಲ್ಲಿಸಲಿ: ರಕ್ಷಿತ್ ಶಿವರಾಂ

Suddi Udaya

ಮುಂಡಾಜೆ ನಿವಾಸಿ ಜೇಮ್ಸ್‌ ಕಾರಿಮಲ ನಿಧನ

Suddi Udaya
error: Content is protected !!