26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡಾಯಿಬೆಟ್ಟು ಸರಕಾರಿ ಶಾಲೆಗೆ ಉಚಿತ ಪುಸ್ತಕ ವಿತರಣೆ

ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂಡಾಯಿಬೆಟ್ಟು ನಡ ಗ್ರಾಮ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ, ಉದ್ಯಮಿ‌ ಹಾಗೂ ಸಮಾಜ ಸೇವಕ ಸುಜಿತ್ ಪ್ರಭು ಕನ್ಯಾಡಿ ನೇತೃತ್ವದ “ಬೆಳಕು ಚಾರಿಟೇಬಲ್ ಟ್ರಸ್ಟ್ ಬೆಳ್ತಂಗಡಿ” ವತಿಯಿಂದ ಉಚಿತ ಪುಸ್ತಕ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು.
ಬೆಳಕು ಚಾರಿಟೇಬಲ್ ಟ್ರಸ್ಟ್ ಸದಸ್ಯ ಹಾಗೂ ಹಿರಿಯ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಪುಸ್ತಕ ವಿತರಿಸಿ ಮಕ್ಕಳಿಗೆ ಹಿತನುಡಿಗಳನ್ನಾಡಿದರು.

ಶಾಲಾ ಸಹ ಶಿಕ್ಷಕಿ ರಶ್ಮಿ ಕಿಶೋರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ವಿಷಯ ಪ್ರಸ್ತಾವನೆಗೈದು‌ ಸ್ವಾಗತಿಸಿದರು.
ಬೆಳಕು‌ ಚಾರಿಟೇಬಲ್ ಟ್ರಸ್ಟ್ ವಿದ್ಯಾ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಸರಕಾರಿ ಶಾಲೆಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುತ್ತಿದೆ. ಈ ಹಿಂದೆ ಕುಂಟಿನಿ, ಅತ್ತಾಜೆ, ನಡ, ಬೆಳ್ತಂಗಡಿ ಜೂನಿಯರ್ ಕಾಲೇಜು ಹಾಗೂ ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆಯಲ್ಲದೆ ಉಣ್ಣಾಲು ಕಿ.‌ ಪ್ರಾಥಮಿಕ ಶಾಲೆ ಮತ್ತು ನಡ ಪ್ರೌಢ ಶಾಲೆಗೆ ಕಂಪ್ಯೂಟರ್ ಅನ್ನೂ ಕೊಡುಗೆಯಾಗಿ ನೀಡಿದೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ಧರ್ಮಸ್ಥಳದ ಸಂತೋಷ್ ಆಚಾರ್ಯ ಮತ್ತು ಕೇಶವ ಪೂಜಾರಿ ಖುಲಾಸೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya
error: Content is protected !!