30.3 C
ಪುತ್ತೂರು, ಬೆಳ್ತಂಗಡಿ
September 9, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ:ಆರೋಪಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ : ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲುಗೆ ಸೇರಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯನ್ನು ಡಿಸೆಂಬರ್ ೨೦೨೩ ರಲ್ಲಿ ಅತ್ಯಾಚಾರ ಮಾಡಿದ ಪ್ರಕರಣ ಸಂಬAಧ ಸಂತ್ರಸ್ತ ಮಹಿಳೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂ.೭ ರಂದು ದೂರು ನೀಡಿದ್ದರು.

ಪ್ರಕರಣದ ಬಗ್ಗೆ ತನಿಖೆ ನಡೆಸಿದ ಧರ್ಮಸ್ಥಳ ಪೊಲೀಸರು ಆರೋಪಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ನಿವಾಸಿ ಪ್ರಸ್ತುತ ಅರಸಿಮಕ್ಕಿ ಗ್ರಾಮದ ಗ್ರಾಮೀಣ ಅಂಚೆ ವಿತರಕ ಆಗಿರುವ ವಿವಾಹಿತ ಸುರೇಶ್(೩೫) ಎಂಬಾತನನ್ನು ಕಳೆಂಜದಲ್ಲಿ ಜೂ.೮ ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸಿ ಜೂ.೯ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ೧೪ ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್.ಪಿ, ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್ ಗಾಣಿಗೇರ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು – ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!