30.3 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಜಿ. ಮಾಧುರ್ಯಗೆ  ಸನ್ಮಾನ

ಧರ್ಮಸ್ಥಳ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ–ರಲ್ಲಿ ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿ. ಮಾಧುರ್ಯ ಅವರು 625ಕ್ಕೆ625 ಅಂಕಗಳನ್ನು ಗಳಿಸಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಾಧುರ್ಯ ಅವರು ಧರ್ಮಸ್ಥಳದ ಅನ್ನಪೂರ್ಣ ಛತ್ರದ ಪ್ರಬಂಧಕರಾದ ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಮಧುರಾ ದಂಪತಿಯ ಪುತ್ರಿಯಾಗಿದ್ದಾರೆ.

ಅವರ ಈ ಅಪೂರ್ವ ಸಾಧನೆಯನ್ನು ಅಭಿನಂದಿಸಿ, ಜೂನ್ 8ರಂದು ಧರ್ಮಸ್ಥಳ ಅನ್ನಪೂರ್ಣ ಛತ್ರದ ಹಿರಿಯ ಸಿಬ್ಬಂದಿಗಳಾದ ಭರತ್‌ರಾಜ್ ಜೈನ್, ಶ್ರೇಣಿಕ್ , ರಾಜು ಸಪಲ್ಯ , ದೇವಿಪ್ರಸಾದ್ , ಅಪ್ಪು ಬಿ , ಬಾಬು ಬಿ , ಉಮೇಶ ಯಂ , ಬಾಕಕೃಷ್ಣ ಶೆಟ್ಟಿಹಾಗೂ ಇತರ ಸಿಬ್ಬಂದಿಗಳು ಜಿ. ಮಾಧುರ್ಯ ಅವರನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಬ್ಬಂದಿಗಳು, ಮಾಧುರ್ಯ ಅವರ ಸಾಧನೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇದೇ ರೀತಿ ಉನ್ನತ ಸಾಧನೆ ಮಾಡಿ ಕುಟುಂಬ, ಶಾಲೆ ಹಾಗೂ ಸಮಾಜಕ್ಕೆ ಕೀರ್ತಿ ತರಲಿ ಎಂದು ಹಾರೈಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಕನ್ಯಾಡಿ: ಶ್ರೀ ರಾಮ ನಾಮ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವ-ನವದುರ್ಗಾ ಹೋಮ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!