26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

ಚಾರ್ಮಾಡಿ: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ ವ್ಯಕ್ತವಾಗಿದೆ.

ಮೂಡಿಗೆರೆ ಅರಣ್ಯ ವಲಯ ವ್ಯಾಪ್ತಿಗೆ ಒಳಪಡುವ ಘಾಟಿ ರಸ್ತೆಯ ತಡೆಗೋಡೆಯ ಸಮೀಪ ಚಿರತೆ ಕಾಣಿಸಿಕೊಂಡಿದೆ. ಈ ಮಾರ್ಗದಲ್ಲಿ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಮಳೆಗಾಲ ಆರಂಭವಾಗಿರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಿದೆ.


ಮಳೆ ಹಾಗೂ ದಟ್ಟ ಮಂಜಿನಿಂದ ದೃಶ್ಯತೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಬದಿ ಅಥವಾ ಅರಣ್ಯ ಪ್ರದೇಶದ ಸಮೀಪ ಕಾಡುಪ್ರಾಣಿಗಳ ಚಲನೆ ತಕ್ಷಣ ಗಮನಕ್ಕೆ ಬಾರದಿರುವ ಸಾಧ್ಯತೆ ಇದೆ. ಇಂತಹ ಸಂದರ್ಭಗಳಲ್ಲಿ ಫೋಟೋ ಅಥವಾ ಸೆಲ್ಫಿ ಪಡೆಯಲು ವಾಹನದಿಂದ ಇಳಿಯುವ ಪ್ರವಾಸಿಗರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚಿಸಿದೆ.


ಚಾರ್ಮಾಡಿ ಘಾಟಿ ಸಂಪೂರ್ಣ ಅರಣ್ಯ ವಲಯವಾಗಿರುವುದರಿಂದ ಕಾಡುಪ್ರಾಣಿಗಳ ಸಂಚಾರ ಸಹಜ. ಆದರೆ ಮಾನವ ಚಟುವಟಿಕೆ ಹೆಚ್ಚಿರುವ ರಸ್ತೆಯ ಸಮೀಪ ಅವು ಕಾಣಿಸಿಕೊಂಡಿರುವುದು ಗಮನಾರ್ಹವಾಗಿದೆ. ಹೀಗಾಗಿ ವಾಹನ ನಿಲ್ಲಿಸುವಾಗ ಸುರಕ್ಷ ಸ್ಥಳ ಆಯ್ಕೆ ಮಾಡುವುದು, ಗುಂಪಾಗಿ ರಸ್ತೆ ಅಂಚಿಗೆ ತೆರಳುವುದು ಹಾಗೂ ಕಾಡುಪ್ರಾಣಿಗಳ ಹತ್ತಿರ ಹೋಗಲು ಯತ್ನಿಸುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Related posts

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya
error: Content is protected !!