July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ ಜೂ. 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ 10 ಗಂಟೆಗೆ ಆರಂಭವಾಗುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ವಹಿಸುವರು. ವಿರಾಜಪೇಟೆ ಶ್ರೀ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಾರ್ಷಿಕ ವರದಿ ಬಿಡುಗಡೆಯನ್ನು ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವೀ.ಹೆಗ್ಗಡೆ, ನವಜೀವನ ಪ್ರಶಸ್ತಿ ಪ್ರದಾನವನ್ನು ಎಂಎಲ್ ಸಿ ಪ್ರತಾಪ ಸಿಂಹ ನಾಯಕ್, ನವಜೀವನ ಕಿರುಚಿತ್ರ ಹಸ್ತಾಂತರವನ್ನು ಬೆಂಗಳೂರು ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್ ನೆರವೇರಿಸುವರು. ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್. ಎಸ್. ಆಶಯ ನುಡಿಗಳನ್ನಾಡುವರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ನ ಟ್ರಸ್ಟಿ ವಿ. ರಾಮಸ್ವಾಮಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರಕಾಶ ಕಾರಂತ್, ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಗಿರೀಶ್ ಕೆ. ಉಪಸ್ಥಿತರಿರುವ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ಹಾಗೂ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾಯಸ್ ತಿಳಿಸಿದ್ದಾರೆ.

Related posts

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಸೇಕ್ರೆಡ್‌ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya
error: Content is protected !!