26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ನಡ : “ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು”ಎಂದು ವಿಶ್ರಾಂತ ಪ್ರಾಂಶುಪಾಲರಾದ ಗಣಪತಿ ಭಟ್ ಕುಳಮರ್ವ ಇವರು ನುಡಿದರು.

ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಲಿಲ್ಲಿ ಪಿವಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾಲೇಜಿನ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಜಿತ್ ಆರಿಗ, ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಪಿ, ರಾಜ್ಯಶಾಸ್ತ್ರ ಉಪನ್ಯಾಸಕ ಶಿಲ್ಪಾ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎಲ್ಲಾ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಷಯವಾರು ಅತ್ಯಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.


ವಿದ್ಯಾರ್ಥಿನಿಯರಾದ ಶಬ್ನಂ ಮತ್ತು ಸ್ಪೂರ್ತಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಗಾಯತ್ರಿ ಸ್ವಾಗತಿಸಿ, ಶೇಕ್ ಅದಿಲ್ ವಂದಿಸಿದರು.

Related posts

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ಗೆಳೆಯರ ಬಳಗದ ನೂತನ ಸಭಾಂಗಣ ನಿರ್ಮಾಣದ ಶಿಲಾನ್ಯಾಸ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya

ಬೆಳ್ತಂಗಡಿ: MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜಿನ ಸಹಯೋಗದಲ್ಲಿ ಡಿಪ್ಲೋಮಾ ಹಾಗೂ ವೃತ್ತಿಪರ ಶಿಕ್ಷಣದ ತರಗತಿಗಳ ಆರಂಭೋತ್ಸವ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya
error: Content is protected !!